ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನ

Btw_Bandadi
Published on

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವವು ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ಅವರ ಮಾರ್ಗದರ್ಶನದಲ್ಲಿ ಶನಿವಾರ ನಡೆಯಿತು.

ಬೆಳಗ್ಗೆ 5ಗಂಟೆಗೆ ಉಷಾ ಪೂಜೆಯೊಂದಿಗೆ ಆರಂಭಗೊಂಡು ದೇವರಿಗೆ ಪಂಚಾಮೃತ ಮತ್ತು ಪವಮಾನ ಅಭಿಷೇಕ ನಡೆಯಿತು. ಸಾಮೂಹಿಕ ಆಶ್ಲೇಷಾ ಬಲಿ, ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ತಂಡದಿಂದ ನೃತ್ಯ ಭಜನೆ ಸಹಿತ ದೇವರ ಬಲಿ ಉತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಪರಿವಾರ ದೈವಗಳಾದ ರಕ್ತೇಶ್ವರಿ, ಕಲ್ಲುರ್ಟಿ, ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು.

ದೇವಳದ ಪ್ರಧಾನ ಅರ್ಚಕ ಕೆ.ಸುಂದರ ರಾವ್, ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಆಡಳಿತಾಧಿಕಾರಿ ಪರೀಕ್ಷಿತ್ ಶೆಟ್ಟಿ, ಅರ್ಚಕ ನಾಗೇಶ ರಾವ್, ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಕುಮಾರ್ ಚೌಟ, ಅರಳ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷ ಜಗದೀಶ ಆಳ್ವ ಅಗ್ಗೊಂಡೆ, ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಸದಸ್ಯ ರಶ್ಮಿತ್ ಶೆಟ್ಟಿ, ಉಷಾ ಸಂತೋಷ್ ಶಿವನಗರ, ಪ್ರಮುಖರಾದ ರಾಜಾ ಎಸ್.ಹೊಳ್ಳ, ಪ್ರಕಾಶ್ ಕುಮಾರ್ ಜೈನ್, ರವೀಂದ್ರ ಪೂಜಾರಿ, ಜಗದೀಶ ಕೊಯಿಲ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಮೋಹನ್ ಕೆ.ಶ್ರೀಯಾನ್, ಶರತ್ ಕುಮಾರ್ ಕೊಯಿಲ, ರಾಜೇಶ ಗೋವಿಂದ ಬೆಟ್ಟ, ಆನಂದ ಬುರಾಲು, ಲೋಕೇಶ ಕೈತ್ರೋಡಿ, ಚಂದ್ರಶೇಖರ ಆಚಾರ್ಯ, ದಯಾನಂದ ಸಪಲ್ಯ, ದಿನೇಶ ಸುವರ್ಣ, ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ ಕೋಟ್ಯಾನ್ ಮತ್ತಿತರರು ಇದ್ದರು.

ವಿವಿಧೆಡೆ ಷಷ್ಠಿ ಮಹೋತ್ಸವ

ತಾಲೂಕಿನ ಸಜಿಪಮಾಗಣೆ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮಾರ್ಗದರ್ಶನದಲ್ಲಿ ನಡೆದ ಷಷ್ಠಿ ಮಹೋತ್ಸವ ಮತ್ತು ಸಾಮೂಹಿಕ ಆಶ್ಲೇಷಾ ಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಎನ್.ಕೆ.ಶಿವ, ಹರಿಪ್ರಸಾದ್ ಭಂಡಾರಿ, ಶ್ರೀನಿವಾಸ ನಾಯ್ಕ, ರಾಜು ಪೂಜಾರಿ, ಸುಮಂತು, ಧನಂಜಯ ಶೆಟ್ಟಿ ಮತ್ತಿತರರು ಪಾಲ್ಗೊಂಡರು. ಸಜಿಪನಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶಂಭೂರು ಶಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ರಾಯಿ ಶ್ರೀ ಮಹಾಲಿಂಗೇರ್ಶವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಮತ್ತು ದೇವರ ಬಲಿ ಉತ್ಸವ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net