ಶ್ರೀ ಲಕ್ಷ್ಮೀ ಕನಕ ನರಸಿಂಹ ಜಾತ್ರೆ 13ರಿಂದ

MDG V L NADGOUDR
Published on

ಮುಂಡರಗಿ: ಪಟ್ಟಣದ ಸುಪ್ರಸಿದ್ಧ ಶ್ರೀ ಲಕ್ಷ್ಮೀ ಕನಕ ನರಸಿಂಹ ದೇವಸ್ಥಾನ ಜಾತ್ರಾ ಮಹೋತ್ಸವವು ಮಾ. 13ರಿಂದ 18ರವರೆಗೆ ಜರುಗಲಿದೆ ಎಂದು ದೇವಸ್ಥಾನ ಉಸ್ತುವಾರಿ ವಿ.ಎಲ್. ನಾಡಗೌಡ್ರ ತಿಳಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 13ರಂದು ಸಂಜೆ 8 ಗಂಟೆಗೆ ಶ್ರೀ ಲಕ್ಷ್ಮೀ ನರಸಿಂಹ ಮಂಗಲ ಸ್ನಾನ, 9 ಗಂಟೆಗೆ ನಂದಿ ದೇವತಾ ಸ್ಥಾಪನೆ. 10 ಗಂಟೆಗೆ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣೋತ್ಸವ ನಂತರ ಮಹಾನೈವೇದ್ಯ, ಮಹಾಮಂಗಳಾರತಿ, ಅನ್ನ ಸಂತರ್ಪಣೆ ನಡೆಯಲಿದೆ. 14ರಿಂದ 20ರವರೆಗೆ ಪ್ರತಿನಿತ್ಯ ಬೆಳಗ್ಗೆಯಿಂದ ಸಂಜೆವರೆಗೂ ವಿವಿಧ ಧಾರ್ವಿುಕ ಪೂಜಾ ಕೈಂಕರ್ಯಗಳು ನೆರವೇರಲಿವೆ. 18ರಂದು ಬೆಳಗ್ಗೆಯಿಂದ ವಿವಿಧ ಧಾರ್ವಿುಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ಗಂಟೆಗೆ ಮಹಾರಥೋತ್ಸವ ಜರುಗುವುದು. ರಾತ್ರಿ 8 ಗಂಟೆಗೆ ಪಲ್ಲಕ್ಕಿ ಸೇವಾ ತೊಟ್ಟಿಲು ಪೂಜಾ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಮಾ. 19 ಮತ್ತು 20ರಂದು ವಿವಿಧ ಧಾರ್ವಿುಕ ಪೂಜಾ ಕಾರ್ಯಗಳು ನಡೆಯಲಿವೆ ಎಂದು ತಿಳಿಸಿದರು.

ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ ಮಾತನಾಡಿ, ಮಾ. 18ರಂದು ರಥೋತ್ಸವ ಬಳಿಕ ಸಂಜೆ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಪುರಸಭೆ ಸದಸ್ಯ ನಾಗರಾಜ ಹೊಂಬಳಗಟ್ಟಿ, ರಾಜು ದಾವಣಗೇರಿ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net