

ಕುಕನೂರು: ತಾಲೂಕಿನ ಮಸಬಹಂಚಿನಾಳ ಗ್ರಾಮದ ಶ್ರೀ ಮಾರುತೇಶ್ವರ ಕಾರ್ತಿಕ ಮಹೋತ್ಸವ ಸೋಮವಾರ ರಾತ್ರಿ ಸಾವಿರಾರೂ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.
ಈ ಭಾಗದ ಆರಾಧ್ಯ ದೈವವಾಗಿರುವ ಆಂಜನೇಯ ಸ್ವಾಮಿಗೆ ಭಕ್ತರು ಬೆಳಗ್ಗೆಯಿಂದ ತಂಡೋಪತಂಡವಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ಆಗುತ್ತಿದ್ದಂತೆ ದೇವಸ್ಥಾನ ಬಳಿ ದೀಪ ಹಚ್ಚಿ ಕಾರ್ತಿಕ ಮಹೋತ್ಸವ ಆಚರಿಸಿದರು. ದೇವಸ್ಥಾನವನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.
ವಿಶೇಷ ದೀಪಾಲಂಕಾರ ಭಕ್ತರ ಕಣ್ಮನ ಸೆಳೆಯಿತು. ನೆರೆದವರೆಲ್ಲರಿಗೂ ಗೋದಿ ಹುಗ್ಗಿ, ಕುಂಬಳಿಕಾಯಿ, ಬದನೆಕಾಯಿ ಪಲ್ಲೆ, ಅನ್ನ, ಸಾಂಬರ್ ಪ್ರಸಾದ ವಿತರಣೆ ಮಾಡಲಾಯಿತು.