

ಮಸ್ಕಿ: ಜಗದ್ಗುರು ಮೌನೇಶ್ವರ ಜಾತ್ರೆ ನಿಮಿತ್ತ ಪಟ್ಟಣದಲ್ಲಿ ಶನಿವಾರ ಜೋಡು ಪಲ್ಲಕ್ಕಿ ಉತ್ಸವ ಶನಿವಾರ ಮಂಗಲವಾದ್ಯಗಳೊಂದಿಗೆ ಅದ್ದೂರಿಯಾಗಿ ಜರುಗಿತು.
ಪಲ್ಲಕ್ಕಿ ಉತ್ಸವದ ಮುನ್ನಾದಿನ ಶುಕ್ರವಾರ ದೇವಾಲಯದಲ್ಲಿರುವ ಉತ್ಸವ ಮೂರ್ತಿ ಹಾಗೂ ಪೂಜಾ ಸಾಮಗ್ರಿ ಹೊರ ತೆಗೆದು ಸಕಲ ವಾದ್ಯ ಮೇಳಗಳೊಂದಿಗೆ ಗಂಗಾ ಪೂಜೆ ನೆರವೇರಿಸಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿ ಅಹೋರಾತ್ರಿ ಭಜನೆ ಮಾಡಲಾಯಿತು.
ಶನಿವಾರ ಬೆಳಗ್ಗೆ ಮೌನೇಶ್ವರ ಹಾಗೂ ವೀರಭದ್ರದೇವರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೌನೇಶ್ವರ ದೇವಸ್ಥಾನ ತಲುಪಿ ಸಂಪನ್ನಗೊಂಡಿತು.