ನಿಮಿಷಾಂಬ ಸನ್ನಿಧಿಯಲ್ಲಿ ಹುಣ್ಣಿಮೆ ಮಹೋತ್ಸವ

SRP_22-03jpg
Published on

ಶ್ರೀರಂಗಪಟ್ಟಣ: ಸಮೀಪದ ಗಂಜಾಂನ ಶಕ್ತಿದೇವತೆ ಶ್ರೀ ನಿಮಿಷಾಂಬ ಸನ್ನಿಧಿಯಲ್ಲಿ ಫೆ.24ರಂದು ಮಾಘ ಶುದ್ಧ ಹುಣ್ಣಿಮೆ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ದೇವಾಲಯದ ಸನ್ನಿಧಿಯಲ್ಲಿ ಅಂದು ಪಂಚಾಮೃತ ಅಭಿಷೇಕ, ಪೂರ್ವಕ ಮಹಾಭಿಷೇಕ ಸೇವೆ, ಬೆಳಗ್ಗೆ 8.30ರಿಂದ 12.30ರವರೆಗೆ ಗಣಹೋಮ, ನಕ್ಷತ್ರ ಹೋಮ, ದುರ್ಗಾಹೋಮ, ಸತ್ಯನಾರಾಯಣಸ್ವಾಮಿ ಪೂಜೆ ನಡೆಯಲಿದೆ. ಸಂಜೆ 6 ರಿಂದ 7 ರವರೆಗೆ ಗಂಗಾ ಕಾವೇರಿ ಆರತಿ ನಡೆಯಲಿದೆ.

ದೇವಾಲಯಕ್ಕೆ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಮಿಳುನಾಡು, ಆಂಧ್ರಪ್ರದೇಶದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಜಿಲ್ಲಾಡಳಿತ ಕ್ರಮವಹಿಸಿದೆ. ಕುಡಿಯುವ ನೀರು, ಶೌಚಗೃಹ, ವೈದ್ಯಕೀಯ ಸೌಲಭ್ಯ ಸೇರಿದಂತೆ ಬಿಸಿಲಿನ ತಾಪ ತಟ್ಟದಂತೆ ಶಾಮಿಯಾನ ಸಹಿತ ಸರತಿ ಸಾಲಿನಲ್ಲಿ ತೆರಳಲು ಬ್ಯಾರಿಕೇಡ್ ಅಳವಡಿಸಲಾಗಿದೆ. ಪಟ್ಟಣದ ಬಸ್ ನಿಲ್ದಾಣದಿಂದ ಸನ್ನಿಧಿಗೆ ತೆರಳಲುಕ್ತರಿಗೆ ಸಾರಿಗೆ ಸೌಕರ್ಯ ಕಲ್ಪಿಸಲಾಗುವುದು. ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಚ್ಚುವರಿ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ಕಾವೇರಿ ನದಿಯಲ್ಲಿ ಭಕ್ತರು ಪುಣ್ಯಸ್ನಾನ ಮಾಡಲಿರುವ ಹಿನ್ನೆಲೆಯಲ್ಲಿ ಸುರಕ್ಷತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಯನ್ನೂ ನಿಯೋಜಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net