ಕಟ್ಟಡ ತೆರವಿಗೆ ಶ್ರೀರಾಮಸೇನೆ ಮನವಿ

22 LXR 2
Published on

ಲಕ್ಷ್ಮೇಶ್ವರ: ಪಟ್ಟಣದ ಭರಮದೇವರ ವೃತ್ತದ ಹತ್ತಿರ ಪುರಸಭೆಗೆ ಸೇರಿದ ಜಾಗದಲ್ಲಿ ಅಂಜುಮನ್ ಎ ಇಸ್ಲಾಂ ಕಮಿಟಿ 6 ಮಳಿಗೆಗಳನ್ನು ನಿರ್ಮಾಣ ಮಾಡಿದ್ದು, ಅವುಗಳನ್ನು ತೆರವುಗೊಳಿಸಲು ಆಗ್ರಹಿಸಿ ಸೋಮವಾರ ಶ್ರೀರಾಮಸೇನೆ ಕಾರ್ಯಕರ್ತರು ಗದಗದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇದು ಪುರಸಭೆಯ ಜಾಗವಾಗಿದ್ದು, ಮಳಿಗೆ ನಿರ್ಮಾಣದಿಂದ ಪುರಸಭೆಗೆ ಬರುವ ಆದಾಯ ಇಲ್ಲದಂತಾಗಿದೆ. ಕಟ್ಟಡ ನಿರ್ಮಾಣಕ್ಕೆ ಪೂರ್ವಾನುಮತಿ ಪಡೆದಿಲ್ಲ. ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಆ ಜಾಗದಲ್ಲಿ ಸಾರ್ವಜನಿಕರಿಗೆ ಅನೂಕೂಲವಾಗುವ ಗ್ರಂಥಾಲಯ ಅಥವಾ ಅಂಗನವಾಡಿ ಕಟ್ಟಡ ನಿರ್ಮಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net