

ಪುತ್ತೂರು ಗ್ರಾಮಾಂತರ: ಹಬ್ಬಗಳ ಮಹತ್ವ, ವಿಶೇಷತೆಗಳನ್ನು ಅರಿತು ಆಚರಿಸಿದಾಗ ಆಚರಣೆಗಳು ಅರ್ಥಪೂರ್ಣವಾಗುತ್ತದೆ. ಸಂಸ್ಕಾರ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಒಳಮೊಗ್ರು ಗ್ರಾಮದ ಕುಂಬ್ರ ರಾಮಗಿರಿ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯುತ್ತಿರುವ 43ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆ ಭಾನುವಾರ ಉದ್ಘಾಟಿಸಿ ಮತನಾಡಿದರು.
ಯಕ್ಷ ಕಲಾವಿದ, ವಿದ್ವಾಂಸ ವಾದಿರಾಜ ಕಲ್ಲೂರಾಯ ಧಾರ್ಮಿಕ ಉಪನ್ಯಾಸ ನೀಡಿದರು. ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ತಿಂಗಳಾಡಿ ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಅಧ್ಯಕ್ಷ ಹರೀಶ ಪುತ್ತೂರಾಯ ಅತಿಥಿಗಳಾಗಿ ಮಾತನಾಡಿದರು. ಕುಂಬ್ರ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಮೋನಪ್ಪ ಪೂಜಾರಿ ಬಡಕ್ಕೋಡಿ ಅಧ್ಯಕ್ಷತೆ ವಹಿಸಿದ್ದರು.
ಹೈಕೋರ್ಟ್ ವಕೀಲ ರಾಹುಲ್ ರೈ, ಕುಂಬ್ರ ಶ್ರೀ ರಾಮ ಭಜನಾ ಮಂದಿರದ ಮಾಜಿ ಅಧ್ಯಕ್ಷ ಗಂಗಾಧರ ರೈ ಕುಯ್ಯರು, ದರ್ಬೆತ್ತಡ್ಕ ಕುಕ್ಕುತ್ತಡಿ ಶ್ರೀನಾಗಬ್ರಹ್ಮ ಗರಡಿಯ ಆಡಳಿತ ಮೊಕ್ತೇಸರ ಜಯರಾಮ ಪೂಜಾರಿ ಕುಕ್ಕುತ್ತಡಿ, ಗಣೇಶೋತ್ಸವ ಸಮಿತಿ ಸಂಚಾಲಕ ರಾಜೇಶ್ ರೈ ಪರ್ಪುಂಜ ಉಪಸ್ಥಿತರಿದ್ದರು.
ಸ್ಮತಿ ಪಲ್ಲತ್ತಾರು ಪ್ರಾರ್ಥಿಸಿದರು. ಲೆಕ್ಕಪರಿಶೋಧಕ ಚಂದ್ರಕಾಂತ ಶಾಂತಿವನ ಸ್ವಾಗತಿಸಿದರು. ಉಪಾಧ್ಯಕ್ಷ ರತನ್ ರೈ ಕುಂಬ್ರ ವಂದಿಸಿದರು. ಹರೀಶ್ ರೈ ಮುಗೇರು ಕಾರ್ಯಕ್ರಮ ನಿರೂಪಿಸಿದರು.