

ಸೊರಬ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ 500 ವರ್ಷಗಳ ಸುದೀರ್ಘ ಸಂಘರ್ಷದ ಲಶ್ರುತಿ ಎಂದು ಹಿಂದು ಸಂಘಟನೆ ಮುಖಂಡ ಸಂಜೀವ ಆಚಾರ್ ತಿಳಿಸಿದರು.
ಪಟ್ಟಣದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಮೂರ್ತಿ ಪ್ರತಿಷ್ಠಾಪನೆಗೆ ಪೂರಕವಾಗಿ ಹಮ್ಮಿಕೊಂಡಿರುವ ಮನೆ ಮನೆಗೂ ಪವಿತ್ರಾ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಸೋಮವಾರ ಚಾಲನೆ ನೀಡಲಾಯಿತು.
ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣಗೊಳ್ಳುತ್ತಿರುವುದು ಸಂಭ್ರಮದ ವಿಚಾರ. ಈ ಸಂದರ್ಭದಲ್ಲಿ ರಾಷ್ಟ್ರದ ಪ್ರತಿ ಮನೆಗೂ ಅಯೋಧ್ಯೆಯಿಂದ ತಂದಿರುವ ಮಂತ್ರಾಕ್ಷತೆಯನ್ನು ತಲುಪಿಸುವ ಕಾರ್ಯವನ್ನು ಜ.15ರವರೆಗೆ ಹಮ್ಮಿಕೊಳ್ಳಲಾಗಿದೆ. ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ, ರಾಮಮಂದಿರದ ಭಾವಚಿತ್ರ ಮತ್ತು ನಿವೇದನಾ ಪತ್ರಗಳನ್ನು ತಲುಪಿಸಲಾಗುತ್ತಿದೆ ಎಂದರು.
ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ವಿತರಿಸಲಾಯಿತು. ಪುರಸಭೆ ಮಾಜಿ ಉಪಾಧ್ಯಕ್ಷೆ ಗೌರಮ್ಮ ಭಂಡಾರಿ, ಬಜರಂಗ ದಳದ ರವಿ ಗುಡಿಗಾರ್, ಪ್ರಮುಖರಾದ ಕೋಟಿ, ಪ್ರಸನ್ನ ಶೇಟ್, ರಾಮಾಚಾರಿ, ಸುಬ್ರಹ್ಮಣ್ಯ, ರಾಜೇಶ್ ಇತರರಿದ್ದರು.