

ಮಂಗಳೂರು: ನಮ್ಮ ಹಿರಿಯರ ಚಿಂತನೆಯಂತೆ ವಿದ್ಯಾರ್ಥಿನಿಯರಿಗೆ ಅನುಕೂಲತೆ ಸೃಷ್ಟಿಸಿ ಸಮಾಜದಲ್ಲಿ ಉತ್ತಮ ಸಾಧನೆ ಮಾಡುವ ದೃಷ್ಟಿಯಿಂದ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯ ಸ್ಥಾಪನೆಯಾಗಿದೆ. ಈ ವಿದ್ಯಾರ್ಥಿನಿ ನಿಲಯ ಎಂಬುವುದು ಹೆಣ್ಮಕ್ಕಳಿಗೆ ಆಶ್ರಯದಾಮ ಇದ್ದಂತೆ ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಚೆಯರ್ ಮೆನ್ ಡಾ. ಎಂ. ಮೋಹನ ಆಳ್ವಾ ಹೇಳಿದರು.
ಲಾಲ್ಭಾಗ್ನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯ ಮತ್ತು ಶಾಂಭವಿ ಭವನದ ಹಾಸ್ಟೆಲ್ ಡೇ ಕಾರ್ಯಕ್ರಮ ಮತ್ತು ಅಮೃತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
80 ವರ್ಷಗಳ ಇತಿಹಾಸ ಇರುವ ಬಂಟರ ಮಾತೃ ಸಂಘದ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದಿಂದ ಬಹಳಷ್ಟು ಮಂದಿ ಹೆಣ್ಮಕ್ಕಳಿಗೆ ಇಲ್ಲಿ ಪ್ರಯೋಜವಾಗಿದೆ. ಪ್ರತೀ ವರ್ಷ ಹಾಸ್ಟೇಲ್ ಡೇ ಆಚರಿಸುವ ಮೂಲಕ ವಿದ್ಯಾರ್ಥಿನಿ ನಿಲಯದಲ್ಲಿ ಇಲ್ಲಿದ್ದ ಮಹಿಳೆಯರು ಮತ್ತೆ ಒಟ್ಟು ಸೇರುವ ಅವಕಾಶ ದೊರೆತಿದೆ ಎಂದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದಲ್ಲಿ ಸಂಸ್ಕೃತಿ ಆಚಾರ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಹಾಗಾಗಿ ಇಲ್ಲಿಯ ಮಕ್ಕಳಲ್ಲಿ ಶಿಸ್ತು, ಸಮಯ ಪ್ರಜ್ನೆಯನ್ನು ಕಾಣಲು ಸಾಧ್ಯವಿದೆ ಎಂದರು.
ಅಮೃತಸಿರಿ ಸ್ಮರಣ ಸಂಚಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅನಾವರಣಗೊಳಿಸಿದರು. ಮುಂಬಯಿಯ ಉದ್ಯಮಿ ಶಶಿರೇಖಾ ಆನಂದ ಶೆಟ್ಟಿ, ಸೆಲೆಬ್ರಿಟಿ ಚೆಪ್ ಶ್ರೀಯಾ ಶೆಟ್ಟಿ, ಅಮತ ಬಿಲ್ಡ್ ಕೇರ್ ಸೊಲ್ಯೂಷನ್ ಪಾಲುದಾರರಾದ ಸಮೀಕ್ಷಾ ಶೆಟ್ಟಿ, ಕೊರಿಯೋಗ್ರಾಫರ್ ಪ್ರಮೋದ್ ಆಳ್ವ, ಬಂಟರ ಮಾತೃ ಸಂಘದ ಕೋಶಾಧಿಕಾರಿ ರಾಮ್ ಮೋಹನ್ ರೈ, ಜತೆ ಕಾರ್ಯದರ್ಶಿ ಸಂಪಿಗೆದಡಿ ಸಂಜೀವ ಶೆಟ್ಟಿ, ವಿದ್ಯಾರ್ಥಿನಿ ನಿಲಯದ ಸಂಚಾಲಕಿ ಶಾಲಿನಿ ಶೆಟ್ಟಿ, ಕಾರ್ಯದರ್ಶಿ ಸಾರಿಕಾ ಭಂಡಾರಿ, ಕೋಶಾಧಿಕಾರಿ ಸವಿತಾ ಚೌಟ, ಜತೆ ಕಾರ್ಯದರ್ಶಿ ಶರ್ಮಿಳಾ ಶೆಟ್ಟಿ, ಸುಜಯ ರೈ, ಉಷಾ ಬಲ್ಲಾಲ್, ಡಾ ಆಶಾ ಜ್ಯೋತಿ ರೈ ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಆರು ಮಂದಿಯನ್ನು ಸನ್ಮಾನಿಸಲಾಯಿತು.
ಹಾಸ್ಟೇಲ್ನ ಸಂಚಾಲಕಿ ಶಾಲಿನಿ ಶೆಟ್ಟಿ ಸ್ವಾಗತಿಸಿದರು. ಜಯಂತಿ ಶೆಟ್ಟಿ ವರದಿ ವಾಚಿಸಿದರು. ವೀಣಾ ಶೆಟ್ಟಿ ವಂದಿಸಿದರು. ಆರ್ ಜೆ ನಯನಾ ಶೆಟ್ಟಿ ಮತ್ತು ಸುನಿಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಅರ್ಪಿತ ಮತ್ತು ವಿಭಾ ನಿರ್ವಹಿಸಿ, ಆಶಾಲತಾ ಶೆಟ್ಟಿ ವಂದಿಸಿದರು.