ಶ್ರೀರಾಮಕುಂಜೇಶ್ವರ ಬಾಲಕಿಯರ ಕಬಡ್ಡಿ ತಂಡ ರಾಜ್ಯಮಟ್ಟಕ್ಕೆ

Kdb_Kabaddi
Published on

ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉಪನಿರ್ದೇಶಕರ ಕಚೇರಿ(ಆಡಳಿತ) ಚಿಕ್ಕಮಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಡೂರು ಆಶ್ರಯದಲ್ಲಿ, ಕಡೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ, ಜಶ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಮಾರ್ಗದರ್ಶನ ನೀಡಿದ್ದರು. ಶಾಲಾ ಮುಖ್ಯಶಿಕ್ಷಕ ಸತೀಶ್ ಭಟ್ ಹಾಗೂ ಶಿಕ್ಷಕ ವೃಂದ, ಆಡಳಿತ ಮಂಡಳಿ, ಹಳೇ ವಿದ್ಯಾರ್ಥಿಗಳು,ಪಾಲಕರು ಅಭಿನಂದನೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net