ಶ್ರೀ ರಾಮಕುಂಜೇಶ್ವರ, ಗುಡ್ ಶೆಫರ್ಡ್ ಶಾಲೆ ಪ್ರಥಮ

Kdb_Volleyball-Winners
Published on

ಕಡಬ: ಕೊಲ ಗ್ರಾಮದ ಸಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಕಡಬ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ನಡೆಯಿತು.

ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಮರ್ಧಾಳ ಗುಡ್ ಶೆಫರ್ಡ್ ಆಂಗ್ಲಮಾಧ್ಯಮ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡಿವೆ.

ಬಾಲಕರ ವಿಭಾಗದಲ್ಲಿ ಕುಂತೂರು ಮಾರ್ ಇವಾನಿಯಸ್ ಆಂಗ್ಲಮಾಧ್ಯಮ ಶಾಲೆ, ಬಾಲಕಿಯರ ವಿಭಾಗದಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿವೆ. ಸಾಯಂಕಾಲ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಕೊಲ ಗ್ರಾಪಂ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ, ಸದಸ್ಯ ಚಿದಾನಂದ ಪಾನ್ಯಾಲ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಎರ್ಮಡ್ಕ, ಕಡಬ ವಲಯದ ಕ್ರೀಡಾ ನೋಡೆಲ್ ಅಧಿಕಾರಿ ಚಂದ್ರಶೇಖರ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ವಾರಿಜಾ ಬಿ. ಸ್ವಾಗತಿಸಿದರು. ಶಿಕ್ಷಕಿ ತಾರಾದೇವಿ ಕೆ. ವಂದಿಸಿದರು. ಶಿಕ್ಷಕ ಶೇಖರ ಪಿ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net