

ಕಡಬ: ಡಿಪಾರ್ಟ್‌ಮೆಂಟ್ ಆಫ್ ಯೂತ್ ಎಂಪವರ್‌ಮೆಂಟ್ ಆ್ಯಂಡ್ ಸ್ಪೋರ್ಟ್ಸ್, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಶ್ರೀ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನ.14ರಿಂದ 18ರವರೆಗೆ 3ನೇ ಮಿನಿ ಒಲಿಂಪಿಕ್ ಕಬಡ್ಡಿ ಚಾಂಪಿಯನ್‌ಷಿಪ್ ನಡೆಯಿತು.
ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಾದ ಧನ್ವಿ ಎಂ, ಸಮರ್ಥ್ ಬಾಹುಬಲಿ ಯಲ್ಲಟ್ಟಿ ಪ್ರಥಮ ಸ್ಥಾನ ಪಡೆದು ಆಲ್ ಇಂಡಿಯಾಕ್ಕೆ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಸ್ವಂತ್, ಮಂಜುನಾಥ್ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ, ಮುಖ್ಯಶಿಕ್ಷಕ ಸತೀಶ್ ಭಟ್ ಮಾರ್ಗದರ್ಶನ ನೀಡಿದ್ದರು.