ರಾಮಾಂಜನೇಯ ಸಂಘಕ್ಕೆ 20 ಲಕ್ಷ ರೂ.ಲಾಭ

mahasabhe
ಕೋಡಿ ಕನ್ಯಾಣ ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಾಧಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಂಜುನಾಥ ಎಸ್ ಕೆ, ಶಂಭು ಪೂಜಾರಿ ಮತ್ತಿತರರು ಇದ್ದರು
Published on

ವಿಜಯವಾಣಿ ಸುದ್ದಿಜಾಲ ಕೋಟ

ಕೋಡಿ ಕನ್ಯಾಣ ಶ್ರೀ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷ ಶಂಭು ಪೂಜಾರಿ ಮಾತನಾಡಿ, ಸಂಸ್ಥೆ 85 ಕೋಟಿ ರೂ. ತನಕ ವ್ಯವಹಾರ ನಡೆಸಿದ್ದು, 20 ಲಕ್ಷ ರೂ.ಗೂ ಹೆಚ್ಚು ಲಾಭ ಗಳಿಸಿದೆ. ಜತೆಗೆ ಸದಸ್ಯರಿಗೆ ಶೇ.15 ಡಿವಿಡೆಂಡ್ ವಿತರಿಲಿದ್ದೇವೆ ಎಂದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆ ನಿರ್ದೇಶಕ ಮಂಜುನಾಥ ಎಸ್.ಕೆ ಮಾತನಾಡಿದರು. ಸಂಸ್ಥೆ ವ್ಯವಸ್ಥಾಪಕಿ ಪ್ರತಿಮಾ ಮಹಾಸಭೆಯ ವಾರ್ಷಿಕ ವರದಿ ವಾಚಿಸಿದರು. ಸಿಬ್ಬಂದಿ ಸ್ವಾತಿ ಲೆಕ್ಕಪರಿಶೋಧನ ವರದಿ ವಾಚಿಸಿದರು. ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಕರ್ಕೇರ ಸಂಸ್ಥೆಯ ಮುಂದಿನ ಕಾರ್ಯಯೋಜನೆ ಕುರಿತು ವಿವರಿಸಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ವಿಜಯ ಬಿ.ಎಸ್, ಜಿಲ್ಲಾ ಸೌಹಾರ್ದ ಒಕ್ಕೂಟದ ಸಿಇಒ ಲೋಹಿತ್ ಸಾಲಿಯಾನ್, ನಿರ್ದೇಶಕರು, ಸಿಬ್ಬಂದಿ ಉಪಸ್ಥಿತರಿದ್ದರು. ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘ ಉಪಾಧ್ಯಕ್ಷ ಮಹಾಬಲ ಕುಂದರ್ ಸ್ವಾಗತಿಸಿದರು. ವ್ಯವಸ್ಥಾಪಕ ಸಂದೀಪ್ ಕರ್ಕೇರ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net