ಕಾಪು ಮಾರಿಗುಡಿಗೆ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ

sai guruji
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಶ್ರೀ ಸಾಯಿ ಈಶ್ವರ್ ಗುರೂಜಿ ಅಬಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿಯವರಿಗೆ ಬಿಲ್ವಪತ್ರೆ ಗಿಡ ನೀಡಿದರು
Published on

ಪಡುಬಿದ್ರಿ: 108 ದಿನ 108 ಕ್ಷೇತ್ರ ಪ್ರದಕ್ಷಿಣೆ ಮಹಾಸಂಕಲ್ಪದ ಅಂಗವಾಗಿ ಶ್ರೀ ಕ್ಷೇತ್ರ ಶಂಕರಪುರ ಏಕ ಜಾತಿ ಧರ್ಮ ಪೀಠ ದ್ವಾರಕಾಮಯಿ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಮಂಗಳವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು.
ದೇವಳ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ದೇವಳ ಸಮಗ್ರ ಜೀರ್ಣೋದ್ಧಾರದ ಬಗ್ಗೆ ಮಾಹಿತಿ ನೀಡಿದರು.

ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಕಾರ್ಯಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್.ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ಸಂಚಾಲಕ ಜಯರಾಮ್ ಆಚಾರ್ಯ, ಕಚೇರಿ ನಿರ್ವಹಣಾ ಸಮಿತಿ ಪ್ರಧಾನ ಸಂಚಾಲಕ ಮಧುಕರ್ ಎಸ್., ಗ್ರಾಮ ಸಮಿತಿ ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ.ಸುವರ್ಣ, ಪ್ರಚಾರ ಸಮಿತಿ ಮಹಿಳಾ ಸಮಿತಿ ಮುಖ್ಯ ಸಂಚಾಲಕಿ ಸಾವಿತ್ರಿ ಗಣೇಶ್, ದ್ವಾರಕಾಮಯಿ ಮಠದ ಟ್ರಸ್ಟಿ ಸುಧಾಕರ್ ಶೆಟ್ಟಿ, ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ವೀಣಾ ಶೆಟ್ಟಿ, ಅಭಿರಾಜ್ ಸುವರ್ಣ ಮತ್ತು ದೇವಳ ಪ್ರಬಂಧಕ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net