ಶ್ರೀ ಶರಣಬಸವೇಶ್ವರ ರಥೋತ್ಸವ ಅದ್ದೂರಿ

Snd Jatre
ಗೊರೇಬಾಳದಲ್ಲಿ ಶ್ರೀ ಶರಣಬಸವೇಶ್ವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
Published on

ಗೊರೇಬಾಳ: ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ 46ನೇ ಮಹಾ ರಥೋತ್ಸವ ಬುಧವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

ಒಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಸಿದ್ಧಲಿಂಗ ಶ್ರೀಗಳು, ಬಸವಲಿಂಗ ಶಿವಾಚಾರ್ಯರು, ನಂದವಾಡಿಗಿಯ ಅಭಿನವ ಚನ್ನಬಸವ ಶಿವಾಚಾರ್ಯರು, ಅಡವಿ ಅಮರೇಶ್ವರದ ತೋಂಟದಾರ್ಯ ಶ್ರೀಗಳು, ಸಂತೆಕೆಲ್ಲೂರಿನ ಗುರುಬಸವ ಶ್ರೀಗಳು ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಬೆಳಗ್ಗೆ ಶರಣಬಸವೇಶ್ವರ ಹಾಗೂ ಚನ್ನಬಸವ ಶಿವಯೋಗಿಗಳ ಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಕುಂಕುಮಾರ್ಚನೆ ಸೇರಿ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net