ಶ್ರೀ ಸಿದ್ದರಾಮೇಶ್ವರಸ್ವಾಮಿ ಜಾತ್ರಾ ಮಹೋತ್ಸವ

IMG-20240516-WA0090
ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ಪನ್ನಸಮುದ್ರದಲ್ಲಿ ಬುಧವಾರ ಶ್ರೀ ಸಿದ್ದರಾಮೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಬುಧವಾರ ಅದ್ದೂರಿಯಾಗಿ ನಡೆಯಿತು.
Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಪನ್ನಸಮುದ್ರ ಗ್ರಾಮದಲ್ಲಿ ಶ್ರೀ ಸಿದ್ದರಾಮೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಮೇ 10ರಿಂದ ಆರಂಭವಾಗಿದ್ದ ಜಾತ್ರಾ ಮಹೋತ್ಸವವು ಬುಧವಾರ ಸಂಪನ್ನಗೊಂಡಿತು. ಮೊದಲು ಮದುವಣಿಗೆ, ರುದ್ರಾಭಿಷೇಕ, ನಡಮುಡಿ ಸೇವೆ, ಅಡ್ಡಪಲ್ಲಕ್ಕಿ ಉತ್ಸವ, ಗುರುಪರವು, ಕೆಂಡೋತ್ಸವ, ಮಣೆವು ಕಾರ್ಯಕ್ರಮಗಳು ಸಂಪ್ರದಾಯದಂತೆ ಜರುಗಿದವು. ಅಂತಿಮ ದಿನ ಶ್ರೀ ಸಿದ್ದರಾಮೇಶ್ವರ ಸ್ವಾಮಿ ದಿವ್ಯ ರಥೋತ್ಸವ ಶ್ರೀ ಬೊಮ್ಮಲಿಂಗೇಶ್ವರ ಸ್ವಾಮೀಜಿ ಅವರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಿ ರಥ ಎಳೆದು ಪುನೀತರಾದರು. ನಂತರ ಪಾನಕ, ಫಲಾಹಾರ, ಅನ್ನ ದಾಸೋಹ ಏರ್ಪಡಿಸಲಾಗಿತ್ತು. ಒಂದು ವಾರದಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net