ಸ್ವಯಂ ಕ್ವಾರಂಟೈನ್‌ಗೆ ಒಳಗಾದ ಸಿದ್ಧಗಂಗಾ ಶ್ರೀಗಳು

siddalinga swamiji
Published on

ತುಮಕೂರು: ಕರೊನಾ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಪೂಜೆ, ಸಮಾರಂಭಗಳಲ್ಲಿ ಭಾಗವಹಿಸದಿರುಲು ತೀರ್ಮಾನಿಸಿದ್ದಾರೆ.

ಕರೊನಾ ಸೋಂಕು ತಗುಲಿದ್ದ ಜಿ.ಎಸ್.ಸೋಮಶೇಖರ್ ಅವರು ಅ.15ರಂದು ನಿಧನರಾದರು. ಶ್ರೀಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಸೋಮಶೇಖರ್ ಅವರ ಅಂತ್ಯಕ್ರಿಯೆ ಅ.16ರಂದು ಸಿದ್ಧಗಂಗಾ ಮಠದಲ್ಲಿ ನಡೆದ ಸಂದರ್ಭದಲ್ಲಿ ನಾನು ಭಾಗವಹಿಸಿದ್ದೆ. ಆ ರೀತಿ ಸಂಪರ್ಕ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ ಎಂದು ಸಿದ್ದಲಿಂಗ ಶ್ರೀಗಳು ತಿಳಿಸಿದ್ದಾರೆ.

ಕ್ವಾರಂಟೈನ್‌ಗೆ ಒಳಗಾಗಿದ್ದು, ಎಲ್ಲ ಪೂರ್ವ ನಿರ್ಧಾರಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಾಗುತ್ತಿಲ್ಲ. ಹಾಗಾಗಿ, ಭಕ್ತಾದಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಸಿದ್ದಲಿಂಗ ಶ್ರೀಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net