ಜ.5ಕ್ಕೆ ಶ್ರೀಸಿದ್ಧಲಿಂಗೇಶ್ವರ ಜಯಂತ್ಯೋತ್ಸವ; ದೇಗುಲಮಠದ ಶ್ರೀಗಳಿಗೆ ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿ

siddalinga
Published on

ಬೆಂಗಳೂರು : ಎಡೆಯೂರು ಶ್ರೀ ಸಿದ್ಧಲಿಂಗೇಶ್ವರರ ಜಯಂತ್ಯೋತ್ಸವ ಹಾಗೂ ತೋಂಟದ ಸಿದ್ಧಲಿಂಗಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಜ.5ಕ್ಕೆ ನಡೆಯಲಿದೆ.

ನೆಲಮಂಗಲದ ಶ್ರೀ ಪವಾಡ ಬಸವಣ್ಣ ದೇವರ ಮಠವು ಆಯೋಜಿಸಿರುವ ಕಾರ್ಯಕ್ರಮವು ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಭಾನುವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ವಿಜಯನಗರದ ಮಾರುತಿ ಮಂದಿರದಿಂದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದ ವರೆಗೆ ಎಡೆಯೂಉ ತೋಂಟದ ಸಿದ್ಧಲಿಂಗೇಶ್ವರರ ಉತ್ಸವ ಜರುಗಲಿದೆ.

ನಂತರ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹಾಗೂ ಸಿದ್ಧಗಂಗೆಯ ಶ್ರೀಸಿದ್ಧಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ನಾಡಿನ ವಿವಿಧ ಮಠಗಳ ಸ್ವಾಮೀಜಿ ಸಮ್ಮುಖದಲ್ಲಿ ಕನಕಪುರ ದೇಗುಲ ಮಠದ ಹಿರಿಯ ಶ್ರೀಮುಮ್ಮಡಿ ನಿರ್ವಾಣ ಸ್ವಾಮಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಮಾರಂಭವನ್ನು ಉದ್ಘಾಟಿಸಲಿದ್ದು, ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವ ಎಂ.ಬಿ.ಪಾಟೀಲ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಅಖಿಲ ಭಾರತ ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಶಂಕರ್ ಬಿದರಿ, ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಸೇರಿ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net