ಶ್ರೀ ಸುಬ್ರಹ್ಮಣ್ಯಸ್ವಾಮಿ ಬೆಳ್ಳಿ ಪಲ್ಲಕ್ಕಿ ಉತ್ಸವ

24ark5
ಅರಕಲಗೂಡು ತಾಲೂಕು ರಾಮನಾಥಪುರದ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಿತು.
Published on

ಅರಕಲಗೂಡು: ತಾಲೂಕಿನ ರಾಮನಾಥಪುರ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಬೆಳ್ಳಿ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು.

ದೇವಾಲಯದಲ್ಲಿ ನಾಗಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಒಳ ಪ್ರಾಂಗಣದಲ್ಲಿ ವಿಶೇಷವಾಗಿ ಹೂವಿನಲ್ಲಿ ಅಲಂಕರಿಸಿದ ಮಂಟಪದಲ್ಲಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ಭಕ್ತರ ಸಮ್ಮುಖದಲ್ಲಿ ದೇಗುಲ ಸುತ್ತ ಮೂರು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಉತ್ಸವದ ವೇಳೆ ಪ್ರತಿಯೊಂದು ಸುತ್ತಿಗೊಂಡರಂತೆ ಪ್ರತ್ಯೇಕ ವಾದ್ಯ ಪ್ರಕಾರದ ಮೂಲಕ ಪೂಜೆ ನೆರವೇರಿಸಲಾಯಿತು.

ದೇವಸ್ಥಾನದ ಪಾರುಪತ್ತೇದಾರ್ ರಮೇಶ್ ಭಟ್ ನೆಲ್ಲಿತೀರ್ಥ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net