ಶ್ರೀ ವೆಂಕಟರಮಣ ಸಂಸ್ಥೆ ಸಂಸ್ಥಾಪನಾ ದಿನಾಚರಣೆ

venkataramana
ಕುಂದಾಪುರದ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ 38ನೇ ಸಂಸ್ಥಾಪನಾ ದಿನಾಚರಣೆ ನಡೆಯಿತು
Published on

ಗಂಗೊಳ್ಳಿ : ಕುಂದಾಪುರದ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳ 38ನೇ ಸಂಸ್ಥಾಪನಾ ದಿನಾಚರಣೆ ಸೋಮವಾರ ನಡೆಯಿತು.

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಗಳ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಕೆ.ಹಾಗೂ ಸುಮಾ ಉಮೇಶ್ ಪುತ್ರನ್ ಶುಭ ಹಾರೈಸಿದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಸಾಧಕರನ್ನು ಹಾಗೂ ಉತ್ತಮ ಫಲಿತಾಂಶಕ್ಕಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ 200 ಬೋಧಕ, ಬೋಧಕೇತರ ಸಿಬ್ಬಂದಿಯನ್ನು ಗೌರವಿಸಲಾಯಿತು. ಪ್ರೌಢಶಾಲಾ ಮುಖ್ಯಶಿಕ್ಷಕ ಕೃಷ್ಣ ಅಡಿಗ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ ಉಪಸ್ಥಿತರಿದ್ದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ ಸ್ವಾಗತಿಸಿ. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜ ವಂದಿಸಿ. ಶಿಕ್ಷಕಿ ಸೌಮ್ಯಾ ನಾವಡ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net