ಶ್ರೀ ವೆಂಕಟೇಶ್ವರಸ್ವಾಮಿ ಪಲ್ಲಕ್ಕಿ ಉತ್ಸವ

26KMD-1
ಕೆ.ಎಂ.ದೊಡ್ಡಿಯ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ವಿಜಯ ದಶಮಿ ಅಂಗವಾಗಿ ದೇವರ ಪಲ್ಲಕ್ಕಿ ಉತ್ತವ ವೈಭವದಿಂದ ನಡೆಯಿತು.
Published on

ಕೆ.ಎಂ.ದೊಡ್ಡಿ: ಇಲ್ಲಿನ ಮಾರುಗುಡಿ ಆವರಣದಲ್ಲಿ ನಿರ್ಮಾಣವಾಗಿರುವ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ವಿಜಯದಶಮಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯ ವಿಜೃಂಭಣೆಯಿಂದ ಜರುಗಿದವು.

ಶ್ರೀ ವೆಂಕಟೇಶ್ವರ ಸೇವಾ ಟ್ರಸ್ಟ್‌ನ ವತಿಯಿಂದ ವಿಜಯದಶಮಿಯಂದು ಶ್ರೀ ವೆಂಕಟೇಶ್ವರ ಸ್ವಾಮಿ ಜತೆಗೆ ಶ್ರೀದೇವಿ ಮತ್ತು ಭೂದೇವಿ ಸಮೇತ ದೇವರ ಪಲ್ಲಕ್ಕಿ ಉತ್ಸವ ವೈಭವದಿಂದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.

ಶ್ರೀ ವೆಂಕಟೇಶ್ವರ ಮೂರ್ತಿಗೆ ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಮೊದಲು ಉತ್ಸವ ಮೂರ್ತಿಯನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿಸಿ, ಮದ್ದೂರು- ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿ, ದೇವಸ್ಥಾನಕ್ಕೆ ತರಲಾಯಿತು.

ನಂತರ ದೇವಾಲಯದ ಸಮೀಪ ಇರುವ ಅರಳಿಮರ ಮತ್ತು ಬನ್ನಿಮರಕ್ಕೆ ಪೂಜೆ ಸಲ್ಲಿಸಲಾಯಿತು. ಉತ್ಸವ ಮೂರ್ತಿಯ ಮೆರವಣಿಗೆಯ ಉದ್ದಕ್ಕೂ ಮಹಿಳೆಯರು ಪೂಜೆ ಸಲ್ಲಿಸಿದರು. ಸಾರ್ವಜನಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಉತ್ಸವದ ವೇಳೆ ಶ್ರೀ ವೆಂಕಟೇಶ್ವರ ಟ್ರಸ್ಟ್‌ನ ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net