ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕೇಂದ್ರ ವಿದ್ಯಾರ್ಥಿಗಳ ರಂಗಪ್ರವೇಶ

Btw_Yakshagana
Published on

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಿಕಾ ಕೇಂದ್ರದ ವಿದ್ಯಾರ್ಥಿಗಳ ರಂಗಪ್ರವೇಶ, ಗುರುವಂದನಾ ಹಾಗೂ ಶ್ರೀ ವಿಷ್ಣುಮೂರ್ತಿ ಯಕ್ಷಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಡಿ.29ರಂದು ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಕೇಂದ್ರದ ಅಧ್ಯಕ್ಷ ರಾಘವೇಂದ್ರ ಬಲ್ಲಾಳ್‌ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗುರು ಚಂದ್ರಶೇಖರ ಭಟ್ ಕೊಂಕಣಾಜೆ ಅವರ ಶಿಷ್ಯರು ರಂಗಪ್ರವೇಶ ಮಾಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಉದ್ಘಾಟಿಸಲಿದ್ದಾರೆ. ಸಂಜೆ 4ಕ್ಕೆ ಪಿಲಾತಬೆಟ್ಟು ಸಿ.ಎ.ಬ್ಯಾಂಕ್ ಅಧ್ಯಕ್ಷ ತುಂಗಪ್ಪ ಬಂಗೇರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಹಿಮ್ಮೇಳ ವಾದಕ ಹರಿನಾರಾಯಣ ಬೈಪಡಿತ್ತಾಯ ಅವರಿಗೆ ಶ್ರೀ ವಿಷ್ಣುಮೂರ್ತಿ ಯಕ್ಷಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಹಾಗೂ ಯಕ್ಷಗುರು ಚಂದ್ರಶೇಖರ ಭಟ್ ಕೊಂಕಣಾಜೆ ಅವರಿಗೆ ಗುರುವಂದನೆ ನಡೆಯಲಿದೆ. ಬಳಿಕ ಯಕ್ಷಗಾನ ನಡೆಯಲಿದೆ ಎಂದರು.

ಗೋಷ್ಠಿಯಲ್ಲಿ ಯಕ್ಷಗುರು ಚಂದ್ರಶೇಖರ ಭಟ್ ಕೊಂಕಣಾಜೆ, ಸಮಿತಿ ಪದಾಧಿಕಾರಿಗಳಾದ ಹರಿಪ್ರಸಾದ್ ರಾವ್ ಕೊಯಿಲ, ಡಾ.ರಾಮಕೃಷ್ಣ ಎಸ್, ಕೀರ್ತನ್ ಶೆಟ್ಟಿ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net