ವಿಶ್ವಕರ್ಮ ಸಮುದಾಯದ ಕೊಡುಗೆ ಅಮೂಲ್ಯ

17 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಶ್ವಕರ್ಮರು ವಿಶ್ವದ ಮೊದಲ ಶಿಲ್ಪಿಗಳು. ಅವರ ಕ್ರಿಯಾಶೀಲತೆ, ಸೃಜನಶೀಲತೆ ವಿಶೇಷವಾದದ್ದು. ಇಂದಿನ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಸಮುದಾಯದ ಸೃಜನಶೀಲತೆ ಮರೆಯಾಗುತ್ತಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವಕರ್ಮ ಸಮುದಾಯದ ಶ್ರಮದಿಂದ ಅನೇಕ ಐತಿಹಾಸಿಕ ಸ್ಮಾರಕಗಳು, ಮಂದಿರಗಳು, ದೇವತಾ ಶಿಲ್ಪಗಳು ರೂಪುಗೊಂಡಿವೆ. ಸಮಯಪ್ರಜ್ಞೆ, ಸೂಕ್ಷ÷್ಮತೆ, ಕೌಶಲ ಮತ್ತು ಭಕ್ತಿಯಿಂದ ಅನೇಕ ಅಪರೂಪದ ಕಲಾಕೃತಿಗಳು ಸೃಷ್ಟಿಯಾಗಿವೆ ಎಂದರು.
ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಅಧ್ಯಕ್ಷತೆ ವಹಿಸಿದ್ದರು. ಗದಗ ಜಿಲ್ಲೆಯ ಕೋಟುಮಚಗಿ ಅರಿವು ಕೇಂದ್ರದ ಗ್ರಂಥಪಾಲಕ ಸೂರ್ಯನಾರಾಯಣ ಈಶಪ್ಪ ಪತ್ತಾರ ಅವರು `ರಾಷ್ಟçಕ್ಕೆ ವಿಶ್ವಕರ್ಮ ಸಮುದಾಯ ನೀಡಿದ ಕಲೆ, ಸ್ಮಾರಕ, ಸಾಂಸ್ಕೃತಿಕ ಕೊಡುಗೆಗಳು' ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕಾಳಪ್ಪ ಬಡಿಗೇರ, ವಿಶ್ವಕರ್ಮ ನಿವೃತ್ತ ನೌಕರರ ಸಂಘದ ಅಧ್ಯಕ್ಷ ವಿಠ್ಠಲ ಜಿ. ಕಮ್ಮಾರ, ಸಮಾಜದ ಮುಖಂಡರಾದ ಸಂತೋಷ ಬಡಿಗೇರ, ವಸಂತ ಅರ್ಕಾಚಾರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net