

ಆಲ್ದೂರು: ಆಲ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶ್ರೀದೇವಿ ಕುಮಾರಸ್ವಾಮಿ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಜಯಶೀಲಾ ಚಿದಂಬರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶ್ರೀದೇವಿ ಕುಮಾರಸ್ವಾಮಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಜಿಪಂ ಎಇಇ ಚೇತನ್ ಇವರ ಅವಿರೋಧ ಆಯ್ಕೆ ಪ್ರಕಟಿಸಿದರು.
ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಉತ್ತಮ ಕೆಲಸ ಮಾಡಲಾಗುವುದು. ಸದಸ್ಯರು ಹಾಗು ಸಿಬ್ಬಂದಿ ಉತ್ತಮ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಮಾಜಿ ಅಧ್ಯಕ್ಷೆ ಜಯಶೀಲಾ ಚಿದಂಬರ್,ಉಪಾಧ್ಯಕ್ಷ ಕೌಷಿಕ್, ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ, ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ, ಕವೀಶ್ ಆಂಬೇಡ್ಕರ್ ಪುತ್ಥಳಿ ನಿರ್ಮಾಣ ಸಮಿತಿಯ ಸದಸ್ಯರು ಇದ್ದರು.