

ಕೋಟ:ಸಹಕಾರಿ ಮಹಾಮಂಡಲ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಸಾಸ್ತಾನದ ಶ್ರೀಧರ ಪಿ.ಎಸ್ ಇತ್ತೀಚೆಗೆ ನಿಯುಕ್ತಿಗೊಂಡಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಅಗಾಧ ಅನುಭವ ಹೊಂದಿರುವ ಇವರು ವಿವಿಧ ಸಂಘ-ಸಂಸ್ಥೆಗಳಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದು, ಸಾವಿರಕ್ಕೂ ಅಧಿಕ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ.