

ಮಾನ್ವಿ: ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ಗುರುಸಾರ್ವಭೌಮ ರಾಘವೇಂದ್ರಸ್ವಾಮಿಗಳ 353 ನೇ ಆರಾಧನ ಮಹೋತ್ಸವದ ಅಂಗವಾಗಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ರಾಘವೇಂದ್ರಸ್ವಾಮಿಗಳ ಮೃತ್ತಿಕಾ ಬೃಂದಾವನಕ್ಕೆ ವಿಶೇಷವಾಗಿ ಫಲಾ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ಹೂವಿನ ಅಲಂಕಾರ ಮಾಡಲಾಗಿತ್ತು. ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದಿಂದ ಬಂದ ಶ್ವೇತ ವಸ್ತ್ರವನ್ನು ರಾಯರ ಬೃಂದಾವನಕ್ಕೆ ಸಮರ್ಪಿಸಲಾಯಿತು. ಪಟ್ಟಣದ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಕಾರ್ಯಕ್ರಮ ನಡೆಯಿತು.
ಕಲ್ಮಠದ ವಿರೂಪಾಕ್ಷ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಗಳು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ, ಪುರಸಭೆ ಸದಸ್ಯ ರಾಜಾ ಮಹೇಂದ್ರನಾಯಕ, ಬ್ರಾಹ್ಮಣ ಸಮಾಜದ ತಾಲೂಕು ಅಧ್ಯಕ್ಷ ಮುದ್ದುರಂಗರಾವ್ ಮುತಾಲಿಕ್, ಅರ್ಚಕ ಪ್ರಹ್ಲಾದಾಚಾರ್, ಪವನ್ ಭಜನಾ ಮಂಡಳಿ ಹಾಗೂ ಮಹಿಳಾ ಭಜನಾ ಮಂಡಳಿ ಸದಸ್ಯರು ಇನ್ನಿತರರು ಇದ್ದರು.