

ಶಿಗ್ಗಾಂವಿ(ಗ್ರಾ): ಶ್ರೀಕ್ಷೇತ್ರ ಕಾಶಿ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ 77ನೇ ಜನ್ಮ ವರ್ದಂತಿ ಮಹೋತ್ಸವದ ಅಂಗವಾಗಿ ತಾಲೂಕಿನ ಬಿಸನಳ್ಳಿ ಗ್ರಾಮದಲ್ಲಿನ ಜಗದ್ಗರು ಪಂಚಾಚಾರ್ಯ ವೇದ, ಆಗಮ, ಸಂಸ್ಕೃತ, ಸಂಗೀತ, ಯೋಗ ಪಾಠಶಾಲೆ ಆವರಣಲ್ಲಿ ಆ. 28ರಂದು ಅಯ್ಯಾಚಾರ, ಶಿವದೀಕ್ಷೆ ಮತ್ತು ಧರ್ಮ ಸಭೆ ಕಾರ್ಯಕ್ರಮ ಜರುಗಲಿದೆ.
ಬಂಕಾಪುರ ಅರಳೆಲೆಮಠದ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯರ ನೇತೃತ್ವದಲ್ಲಿ ನಡೆಯುವ ಧರ್ಮ ಸಭೆಯಲ್ಲಿ ಹಿರೇಮಣಕಟ್ಟಿಯ ವಿಶ್ವಾರಾಧ್ಯ ಶಿವಾಚಾರ್ಯರು, ಅಕ್ಕಿಆಲೂರಿನ ಚಂದ್ರಶೇಖರ ಶಿವಾಚಾರ್ಯರು, ಹೋತನಹಳ್ಳಿಯ ಶಂಭುಲಿಂಗ ಶಿವಾಚಾರ್ಯರು, ಕೂಡಲದ ಗುರುಮಹೇಶ್ವರ ಶಿವಾಚಾರ್ಯರು ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಶಿವಾಚಾರ್ಯರು, ಜಂಗಮವಟುಗಳು ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಪಾಠಶಾಲೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.