ಶ್ರೀಗಳ ಕನ್ನಡ ಪ್ರೇಮ ಅಪಾರ

klr 25-1 jayanti
ಭೈರನಹಟ್ಟಿ ಶ್ರೀ ಮಠದಲ್ಲಿ ಬಾಲ್ಕಿ ಚನ್ನಬಸವ ಪಟ್ಟದೇವರು ಹಾಗೂ ನಾಗನೂರು ಶಿವಬಸವ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತ್ಯುತ್ಸವ ಆಚರಿಸಲಾಯಿತು. ಮಹಾಂತೇಶ ಹಿರೇಮಠ, ಶಾಂತಲಿಂಗ ಶ್ರೀಗಳು, ಗುರುಪಾದಪ್ಪ ಹಸಬಿ, ರೇಖಾ ಹಸಬಿ, ಸಹನಾ ತಟ್ಟಿ, ಮಲ್ಲಪ್ಪ ಶೆಟ್ಟರ, ಶಿವಣ್ಣ ಮೊರಬದ ಮತ್ತಿತರರಿದ್ದಾರೆ.
Published on

ಕುಳಗೇರಿಕ್ರಾಸ್: ಕರ್ನಾಟಕದ ಏಕೀಕರಣ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಜಲ್‌ಅಲಿ ಆಯೋಗ ಹಾಗೂ ಮಹಾಜನ್ ಆಯೋಗಕ್ಕೆ ನೇರ ವರದಿ ನೀಡಿ ಬೆಳಗಾವಿ ನಮ್ಮದು ಎಂದು ಪ್ರತಿಪಾದಿಸಿದ ನಾಗನೂರು ಶ್ರೀಗಳ ಕನ್ನಡ ಪ್ರೇಮ ನಮ್ಮೆಲ್ಲರಿಗೂ ಸ್ಫೂರ್ತಿದಾಯಕ ಎಂದು ಶ್ರೀಮಠದ ಕಾರ್ಯದರ್ಶಿ ಮಹಾಂತೇಶ ಹಿರೇಮಠ ಹೇಳಿದರು.

ಭೈರನಹಟ್ಟಿ ಶ್ರೀ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕರ್ನಾಟಕ ಸುವರ್ಣ ಸಂಭ್ರಮದ ಸ್ಮರಣೆಯಲ್ಲಿ ಏಕೀಕರಣ ಯೋಧರ ಯಶೋಗಾಥೆ-41 ಕಾರ್ಯಕ್ರಮ ಹಾಗೂ ಬಾಲ್ಕಿ ಚನ್ನಬಸವ ಪಟ್ಟದ್ದೇವರ ಹಾಗೂ ನಾಗನೂರು ಶಿವಬಸವ ಶ್ರೀಗಳ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರೃಹೋರಾಟ ಮತ್ತು ಕರ್ನಾಟಕ ಏಕೀಕರಣಕ್ಕೆ ನಮ್ಮ ನಾಡಿನ ಮಠಗಳಲ್ಲಿ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠ ಮತ್ತು ಬೀದರನ ಬಾಲ್ಕಿ ಮಠಗಳ ಕೊಡುಗೆ ಅಪಾರವಾಗಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತವಾಗಿ ಅನ್ನ, ಅಕ್ಷರ ಅರಿವು ಕೊಟ್ಟು ತ್ರಿವಿದ ದಾಸೋಹ ಮಾಡುವ ಮೂಲಕ ಲಕ್ಷಾಂತರ ಮಕ್ಕಳ ಬಾಳಿಗೆ ದಾರಿದೀಪವಾಗಿ ಕೈಂಕರ್ಯ ಮಾಡುತ್ತಿವೆ ಎಂದರು.

ಶಾಂತಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ತೇಜಸ್ವಿನಿ ಸಿಂಧೂರ ಅವರು ತಮ್ಮ ಸಹೋದರ ಕಲ್ಯಾಣಪ್ಪ ಹಸಬಿಯವರ ಜನ್ಮದಿನದ ಪ್ರಯುಕ್ತ ಶ್ರೀಮಠದ ವಿದ್ಯಾರ್ಥಿಗಳಿಗೆ ಅನ್ನದಾಸೋಹ ಆಯೋಜಿಸಿದ್ದರು.

ಗುರುಪಾದಪ್ಪ ಹಸಬಿ, ರೇಖಾ ಹಸಬಿ, ಸಹನಾ ತಟ್ಟಿ, ಮಲ್ಲಪ್ಪ ಶೆಟ್ಟರ, ಶಿವಣ್ಣ ಮೊರಬದ, ಬಸವರಾಜ ಐನಾಪೂರ, ಗ್ರಾಪಂ ಅಧ್ಯಕ್ಷ ಜ್ಞಾನದೇವ ಮನೇನಕೊಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net