

ಹುಬ್ಬಳ್ಳಿ: ಇಲ್ಲಿಯ ನವನಗರ ಶಿವರಾತ್ರಿ ಜಾಗರಣೋತ್ಸವ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶಾರದಾ ಪೀಠದ ಶ್ರೀ ಅಭಿನವ ಶಂಕರ ಭಾರತಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಸಮಿತಿ ಅಧ್ಯಕ್ಷ ಆರ್.ಎಸ್. ಕುಲಕರ್ಣಿ ನೇತೃತ್ವದಲ್ಲಿ ಭಕ್ತರು ಭಾಗವಹಿಸಿದ್ದರು.