ಅಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧ ಆಯ್ಕೆ

13kkr3( 3-25 gp iknali pr ele
Published on

ಮಳವಳ್ಳಿ: ತಾಲೂಕಿನ ಪಂಡಿತಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು.

ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ನಾಗರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಶ್ರೀನಿವಾಸ್ ಒಬ್ಬರೇ ಉಮೇದುವಾರಿಕೆ ಸಲ್ಲಿಸಿದ್ದ ಕಾರಣ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ನೀರಾವರಿ ನಿಗಮದ ಎಇಇ ಗೋಪಿನಾಥ್ ಅವರು ಶ್ರೀನಿವಾಸ್ ಅವರು ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಣೆ ಮಾಡಿದರು.

ಶ್ರೀನಿವಾಸ್ ಮಾತನಾಡಿ, ನನ್ನ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ, ಎಲ್ಲರ ಸಹಕಾರದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಗ್ರಾ.ಪಂ.ಉಪಾಧ್ಯಕ್ಷೆ ಮಹದೇವಮ್ಮ, ಸದಸ್ಯರಾದ ಕೆ. ಕುಮಾರ್, ಸರೋಜಮ್ಮ, ಪದ್ಮ, ಡಿ.ಜಿ. ನಾಗರಾಜು, ವೆಂಕಟಚಲಯ್ಯ, ಶಶಿಕುಮಾರ್, ಮಹದೇವು, ಮುಖಂಡರಾದ ಪುಟ್ಟಸ್ವಾಮಿ, ರವೀಂದ್ರ ಕುಮಾರ್, ವೆಂಕಟರಾಜು, ಪ್ರಮೋದ, ಮಾದೇಶ್, ಕೆಂಚಪ್ಪ, ಮಹದೇವ, ಸತೀಶ , ಪಿಡಿಒ ಯಶಸ್ವಿನಿ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net