ಹುಬ್ಬಳ್ಳಿ: ಇಲ್ಲಿಯ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜದ ವತಿಯಿಂದ ಶ್ರೀರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ಮಹೋತ್ಸವದ ಪ್ರಯುಕ್ತ ದೇಶಪಾಂಡೆನಗರ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಆ. 11ರಂದು ಸಂಜೆ 5.30ಕ್ಕೆ ಶ್ರೀನಿವಾಸ ಕಲ್ಯಾಣ ಮಹೋತ್ಸವ ಏರ್ಪಡಿಸಲಾಗಿದೆ.
ಹುಬ್ಬಳ್ಳಿಯ ಮಧ್ವ ಭಾರತಿ ವೃಂದದ ರಾಘವೇಂದ್ರ ಹೊಸಳ್ಳಿ ಅವರ ನೇತೃತ್ವದಲ್ಲಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಭಕ್ತರು ಭಾಗವಹಿಸಿ ಶ್ರೀರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕೆಂದು ಸಮಾಜದ ಅಧ್ಯಕ್ಷ ಅನಂತಪದ್ಮನಾಭ ಐತಾಳ ವಿನಂತಿಸಿದ್ದಾರೆ.