

ಕೋಟ: ಸಮಾನ ಮನಸ್ಕರ ತಂಡದ ವತಿಯಿಂದ ಸಾಲಿಗ್ರಾಮ ಹಳೆಕೋಟೆ ಮೈದಾನದಲ್ಲಿ ಏ.2, 3ರಂದು ಶ್ರೀನಿವಾಸ ಕಲ್ಯಾಣೋತ್ಸವ ಆಯೋಜಿಸಲು ತೀರ್ಮಾನಿಸಲಾಗಿದ್ದು, ಸೋಮವಾರ ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದ ಡಾ.ವಿಜಯ ಮಂಜರ್ ಅವರು ಶ್ರೀನಿವಾಸ ಕಲ್ಯಾಣದ ಆಯೋಜನೆ ಕುರಿತು ಮಾತನಾಡಿದರು. ಉದ್ಯಮಿ ಎಂ.ಸಿ.ಚಂದ್ರಶೇಖರ್ ಅವರನ್ನು ಶ್ರೀನಿವಾಸ ಕಲ್ಯಾಣ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.
ಪ್ರಮುಖರಾದ ಐರೋಡಿ ವಿಠ್ಠಲ ಪೂಜಾರಿ, ಪ್ರತಾಪ್ ಶೆಟ್ಟಿ, ಸಾಲಿಗ್ರಾಮ ಪಪಂ ಅಧ್ಯಕ್ಷೆ ಸುಕನ್ಯಾ ಜಗದೀಶ್, ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ವಿಶ್ವಕರ್ಮ ಸಮಾಜದ ಗಣ್ಯರಾದ ಸುಬ್ರಾಯ ಆಚಾರ್ಯ, ಪಾಂಡೇಶ್ವರ ಗ್ರಾಪಂ ಅಧ್ಯಕ್ಷೆ ಸುಶೀಲಾ ಪೂಜಾರಿ ಇದ್ದರು.