ಶ್ರೀರೇಣುಕಾ ಎಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

09M.D.R.3
Published on

ಮದ್ದೂರು: ಪಟ್ಟಣದ ಶ್ರೀರೇಣುಕಾ ಎಲ್ಲಮ್ಮ ದೇವಿಯ 48ನೇ ವರ್ಷದ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ ನಡೆಯಿತು.

ಭರತ ಹುಣ್ಣಿಮೆ ಪ್ರಯುಕ್ತ ಬೆಳಗ್ಗೆ ಸುಪ್ರಭಾತ ಸೇವೆ, ಗಣಪತಿ ಪ್ರಾರ್ಥನೆ, ರಕ್ಷಾಬಂಧನ, ಶ್ರೀರೇಣುಕಾ ಎಲ್ಲಮ್ಮ ದೇವಿಗೆ ಶುಭ ಕುಂಭ ಲಗ್ನದಲ್ಲಿ ಚಂಡಿಕಾ ಹೋಮ ಪ್ರಾರಂಭವಾಗಿ ಮಹಾಪೂರ್ಣಾಹುತಿ ನೆರವೇರಿತು.

ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗ ಮತ್ತು ತಂಬಿಟ್ಟಿನಾರತಿ ಮಾಡಲಾಯಿತು ಹಾಗೂ ಸಾವಿರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ರಾತ್ರಿ ಶ್ರೀರೇಣುಕಾ ಎಲ್ಲಮ್ಮ ದೇವಿಯ ಮುತ್ತಿನ ಪಲ್ಲಕ್ಕಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವೆರವಣಿಗೆ ಮಾಡಲಾಯಿತು.
ರಾಜ್ಯ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net