ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೊಡುಗೆ, ಶ್ರೀಶಾ ಸೌಹಾರ್ದ ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್ ಹೇಳಿಕೆ

shreesha
ದರೆಗುಡ್ಡೆ ಶಾಲೆಯಲ್ಲಿ ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆರೋಗ್ಯ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಿತು. ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್, ನಿರ್ದೇಶಕ ಸುರೇಶ್ ಬೈಂದೂರು ಮೊದಲಾದವರು ಹಾಜರಿದ್ದರು.
Published on

ಮಂಗಳೂರು: ಸ್ವಸ್ಥ ಸಮಾಜ ನಿರ್ಮಾಣಕ್ಕೆ ಆರೋಗ್ಯ ಹಾಗೂ ಶಿಕ್ಷಣ ಅತಿ ಮುಖ್ಯ. ಈ ನಿಟ್ಟಿನಲ್ಲಿ ತಮ್ಮ ಸೊಸೈಟಿ ಆರೋಗ್ಯ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಶ್ರೀಶಾ ಸೊಸೈಟಿ ಅಧ್ಯಕ್ಷ ಎಂ.ಎಸ್.ಗುರುರಾಜ್ ಹೇಳಿದರು.

ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದರೆಗುಡ್ಡೆ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಬೃಹತ್ ಆರೋಗ್ಯ, ದಂತ ಉಚಿತ ಹಾಗೂ ಕಣ್ಣಿನ ತಪಾಸಣಾ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಮಂಗಳೂರಿನ ಅತ್ತಾವರ ಕೆಎಂಸಿ ಹಾಗೂ ದೇರಳಕಟ್ಟೆಯ ಯೇನೆಪೋಯ ದಂತ ಕಾಲೇಜಿನ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದರು. 250ಕ್ಕೂ ಅಧಿಕ ರೋಗಿಗಳು ಶಿಬಿರದ ಸದುಪಯೋಗಪಡೆದುಕೊಂಡರು. ಕಣ್ಣಿನ ಸಮಸ್ಯೆ ಇದ್ದವರಿಗೆ ಸ್ಥಳದಲ್ಲೇ ಉಚಿತ ಕನ್ನಡಕ ಹಾಗೂ ಇತರ ಕಾಯಿಲೆಗೆ ಔಷಧ ಉಚಿತವಾಗಿ ನೀಡಲಾಯಿತು.

ಶ್ರೀಶಾ ಸೊಸೈಟಿ ಪ್ರತಿ ತಿಂಗಳೂ ಮಂಗಳೂರು ಹೊರವಲಯಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತಿದೆ. ಇದು ಈ ವರ್ಷದ ಎಂಟನೇ ಶಿಬಿರವಾಗಿದೆ. ಶ್ರೀಶಾ ಸೊಸೈಟಿಯ ನಿರ್ದೇಶಕ ಸುರೇಶ್ ಬೈಂದೂರು ಶಿಬಿರದ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net