ಶಾಲಾ ನಾಯಕನಾಗಿ ಶ್ರೀಶನ್ ಖಾರ್ವಿ ಆಯ್ಕೆ

gan (4)
Published on

ಕುಂದಾಪುರ: ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ ಗುರುವಾರ ನಡೆಯಿತು.

ಶಾಲಾ ವಿದ್ಯಾರ್ಥಿ ನಾಯಕ ಹಾಗೂ ಉಪನಾಯಕನ ಆಯ್ಕೆಗೆ ಚುನಾವಣೆ ನಡೆಯಿತು. ವಿದ್ಯಾರ್ಥಿ ನಾಯಕ ಮತ್ತು ಉಪನಾಯಕನ ಸ್ಥಾನಕ್ಕೆ ಸ್ಪರ್ಧಿಸುವ ವಿದ್ಯಾರ್ಥಿಗಳು ಚುನಾವಣಾಧಿಕಾರಿ ಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಯಶೋದಾ ಅವರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ ನಾಮಪತ್ರಗಳ ಪರಿಶೀಲನೆ, ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ನಡೆಯಿತು. ಚುನಾವಣಾ ಕಣದಲ್ಲಿದ್ದ ವಿದ್ಯಾರ್ಥಿಗಳ ಪಟ್ಟಿ ಹಾಗೂ ಚಿಹ್ನೆ ನೀಡಲಾಯಿತು. ವಿದ್ಯಾರ್ಥಿಗಳು ಚುನಾವಣೆಯಲ್ಲಿ ಪಾಲ್ಗೊಂಡರು. ಹೆಚ್ಚು ಮತಗಳನ್ನು ಪಡೆದ 8ನೇ ತರಗತಿಯ ಶ್ರೀಶನ್ ಖಾರ್ವೀ ಶಾಲಾ ನಾಯಕನಾಗಿ, ದಿಶಾ ಖಾರ್ವಿ ಉಪನಾಯಕಿಯಾಗಿ ಆಯ್ಕೆಯಾದರು. ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಮಂತ್ರಿಮಂಡಲ ರಚಿಸಿ ಪ್ರಮಾಣವಚನ ಬೋಧಿಸಿ, ಜವಾಬ್ದಾರಿ ಹಂಚಿಕೆ ವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net