ಶ್ರೀವಿಧುಶೇಖರ ಭಾರತೀ ಶ್ರೀ ಆಶೀರ್ವಾದ ಪಡೆದ ಸಿಎಂ

31
Published on

ಮೈಸೂರು: ಲೋಕಸಭೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿರುವ ಶೃಂಗೇರಿ ಶಂಕರ ಮಠಕ್ಕೆ ಭೇಟಿ ನೀಡಿ, ಶ್ರೀವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಾದ ಪಡೆದರು.
ಧಾರ್ಮಿಕ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿರುವ ಶ್ರೀವಿಧುಶೇಖರ ಭಾರತೀ ಸ್ವಾಮೀಜಿ, ಶೃಂಗೇರಿ ಶಂಕರ ಮಠದಲ್ಲಿ ವಾಸ್ತವ್ಯ ಹೂಡಿದ್ದು, ಮಠಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಮಂಗಳವಾದ್ಯ, ಮಂತ್ರಘೋಷದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ಶಂಕರ ಮಠಕ್ಕೆ ತೆರಳಿ ದರ್ಶನ ಪಡೆದರು. ಮುಖ್ಯಮಂತ್ರಿಗಳನ್ನು ಗೌರವಿಸಿದ ಸ್ವಾಮೀಜಿ ಕೆಲಕಾಲ ಮಾತುಕತೆ ನಡೆಸಿ ಕುಶಲೋಪರಿ ವಿಚಾರಿಸಿದರು.
ಸಚಿವ ಕೆ.ವೆಂಕಟೇಶ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್, ಶಾಸಕರಾದ ಕೆ.ಹರೀಶ್‌ಗೌಡ, ಡಿ.ರವಿಶಂಕರ್, ಮಾಜಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಕೆ. ಸೋಮಶೇಖರ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net