

ಬೀಳಗಿ: ಎಲ್ಲರೂ ಆರೋಗ್ಯವಾಗಿರಬೇಕು. ಆರೋಗ್ಯವಂತ ಸಮಾಜ ನಿರ್ಮಾಣ ಹಾಗೂ ಗ್ರಾಮೀಣ ಭಾಗದಲ್ಲಿ ವೈದ್ಯಕಿಯ ಸೇವೆ ಕೊಡುವಲ್ಲಿ ಮಾಜಿ ಸಚಿವ ಎಸ್.ಆರ್.ಪಾಟೀಲರ ಕೊಡುಗೆ ಅಪಾರ ಎಂದು ಬೀಳಗಿ ಪಟ್ಟಣ ಬ್ಯಾಂಕಿನ ಉಪಾಧ್ಯಕ್ಷ ಸತ್ಯಪ್ಪ ಮೇಲ್ನಾಡ ಹೇಳಿದರು.
ಪಟ್ಟಣದ ಸಹಕಾರಿ ಬ್ಯಾಂಕಿನ ರಜತ ಮಹೋತ್ಸವ 2025ರ ಪ್ರಯುಕ್ತ ಬಾಡಗಂಡಿಯ ಎಸ್.ಆರ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಸಂಹಯೋಗದಲ್ಲಿ ಮಹಿಳೆಯರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತ ಸಣ್ಣ ಹಳ್ಳಿಯಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ಮಾಡಿ ಬೀಳಗಿಯನ್ನು ಇತಿಹಾಸದ ಭೂಪಟದಲ್ಲಿ ಬರುವಂತೆ ಮಾಡಿದ್ದಾರೆ ಎಂದರು.
ಬೀಳಗಿ ಪಟ್ಟಣ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಲ್.ಬಿ. ಕುರ್ತಕೋಟಿ, ನಿರ್ದೇಶಕ ಎಚ್.ಎ. ಬೀಳಗಿ, ಡಾ.ಶೈಲಾ, ಡಾ. ಪ್ರವೀಣ ಕುಮಾರ, ಡಾ. ಶಂಕರ, ಉಪ ಪ್ರಧಾನ ವ್ಯವಸ್ಥಾಪಕ ಜಿ.ಎಸ್. ಬನಹಟ್ಟಿ, ವ್ಯವಸ್ಥಾಪಕ ಎ.ಎಚ್. ಬೀಳಗಿ, ಶೀಲ್ಪಾ ಪಾಟೀಲ ಇದ್ದರು.