ಎಸ್‌ಎಸ್‌ಎಂ ಜನ್ಮದಿನ ನಿಮಿತ್ತ ರಕ್ತದಾನ ಶಿಬಿರ

mk
Published on

ಹರಿಹರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹುಟ್ಟುಹಬ್ಬದ ಅಂಗವಾಗಿ ಹರಿಹರದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಎನ್.ಎಚ್. ಶ್ರೀನಿವಾಸ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಶಾಸಕರ ಗೆಲುವಿಗೆ ಕಾರಣರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಜನ್ಮದಿನ ಸೆ.22ರಂದು ಇದ್ದು, ಸೆ.21ರಂದು ರಕ್ತದಾನ ಶಿಬಿರ ಹಮ್ಮಿಕೊಂಡಿದ್ದೇವೆ ಎಂದರು.

ನಗರದ ಅಕ್ಷಯ ಆಸ್ಪತ್ರೆ ಹಾಗೂ ಎಸ್‌ಎಸ್ ಆಸ್ಪತ್ರೆ ಸಹಭಾಗಿತ್ವದಲ್ಲಿ ಶಿಬಿರ ಹಮ್ಮಿಕೊಂಡಿದ್ದು, ಉದ್ಘಾಟನೆಯನ್ನು ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅಥವಾ ಪ್ರಭಾ ಮಲ್ಲಿಕಾರ್ಜುನ್ ಅವರು ನೆರವೇರಿಸುವರು ಎಂದರು.

ಶಿಬಿರದಲ್ಲಿ ಸಾರ್ವಜನಿಕರು, ಎಸ್‌ಎಸ್‌ಎಂ ಆಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡು ರಕ್ತದಾನ ಮಾಡುವಂತೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ರಾಘವೇಂದ್ರ ಬೊಂಗಾಳೆ, ಹಾಲೇಶ್, ಮಹಮದ್ ಅಲಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net