

ರಾಮನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನುಆಚರಿಸದೆ ನಿರ್ಲಕ್ಷ್ಯ ತೋರಿರುವ ಹಾರೋಹಳ್ಳಿ ತಾಲೂಕು ತಹಸೀಲ್ದಾರ್ ವಿಜಯಣ್ಣ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಸಮತಾ ಸೈನಿಕ ದಳ ಯುವ ಘಟಕ ರಾಜ್ಯಾಧ್ಯಕ್ಷ ಡಾ. ಜಿ. ಗೋವಿಂದಯ್ಯ ಮತ್ತು ಪಧಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಡಾ. ಜಿ. ಗೋವಿಂದಯ್ಯ ಮಾತನಾಡಿ ಸಮಾಜ ಕಲ್ಯಾಣ ಇಲಾಖೆವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನುದೇಶದಲ್ಲೇ ಮೊದಲ ಭಾರಿಗೆ ಕರ್ನಾಟಕ ರಾಜ್ಯದಲ್ಲಿ ಶುಕ್ರವಾರ ಆಚರಿಸಲಾಗುತ್ತಿದೆ.
ಸಂವಿಧಾನದ ಬಗ್ಗೆ ಅರಿವು ವ್ಯಾಪಕ ಪ್ರಚಾರ ನೀಡಲು ಸಂವಿಧಾನದ ಪ್ರಾಮುಖ್ಯತೆಯನ್ನು ತಿಳಿಸಲು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಸಲಹಾ ಸಮಿತಿಯನ್ನು ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಲಹಾ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಆದರೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ತಹಸೀಲ್ದಾರ್ ಸರ್ಕಾರದ ಆದೇಶದ ಅನ್ವಯ ತಾಲೂಕು ಮಟ್ಟದ ಸಲಹಾ ಸಮಿತಿಯ ಯಾವುದೇ ಕರ್ತವ್ಯ ನಿರ್ವಹಿಸಿರುವುದಿಲ್ಲ. ಸಮುದಾಯದ ಮುಖಂಡರು ಈ ಬಗ್ಗೆ ವಿಚಾರಿಸಿದಾಗ ಸರಿಯಾಗಿ ಸ್ಪಂಧಿಸದೆ ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ.
ದೇಶದ ಸಂವಿಧಾನದ ಮೂಲ ಆಶಯಗಳನ್ನೊಳಗೊಂಡ ಸಂವಿಧಾನ ಫೀಠಿಕೆಯ ವಾಚನವನ್ನು ಸಹಾ ತಾಲೂಕಿನಲ್ಲಿ ಆಯೋಜಿಸದೆ ಕರ್ತವ್ಯ ನಿರ್ಲಕ್ಷ್ಯತೋರಿರುತ್ತಾರೆ. ಈ ಹಿನ್ನೆಲೆಯಲ್ಲಿ ಇವರ ಮೇಲೆ ಸೂಕ್ತ ಶಿಸ್ತುಕ್ರಮ ಜರುಗಿಸಿ ಅಮಾನತುಗೊಳಿಸಿ ದೌರ್ಜನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
ಈ ಸಂಧರ್ಭದಲ್ಲಿದಲಿತ ಮುಖಂಡರಾದ ಶಿವಕುಮಾರಸ್ವಾಮಿ, ಬೆಣಚಿಕಲ್‌ದೊಡ್ಡಿ ರುದ್ರೇಶ್, ಹರೀಶ್ ಬಾಲು, ವೆಂಕಟೇಶ್, ರಾಮಲಿಂಗಯ್ಯ, ಶ್ರೀನಿವಾಸ್ ಇದ್ದರು.