ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಸಂಕಲ್ಪ ಮಾಡೋಣ...

School-1
Published on

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಆಶಯ

ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆಯ ಸಿದ್ಧತಾ ಸಭೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಹಂತವು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಘಟ್ಟವಾಗಿದೆ. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರು ವಿಶೇಷ ಮುತುವರ್ಜಿ ವಹಿಸಬೇಕು. ವಾರ್ಷಿಕ ಪರೀಕ್ಷೆಯಲ್ಲಿ ಮತ್ತೊಮ್ಮೆ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ಎಲ್ಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಂಕಲ್ಪ ಮಾಡಿಕೊಂಡು ಸಜ್ಜಾಗಬೇಕು ಎಂದು ಶಾಸಕ ಯಶ್​ಪಾಲ್​ ಸುವರ್ಣ ಕರೆ ನೀಡಿದರು.

School-2
ಉಡುಪಿಯ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಎಲ್ಲ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಎಲ್ಲ ಪ.ಪೂ. ಕಾಲೇಜು ಪ್ರಾಂಶುಪಾಲರಿಗಾಗಿ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಅಂತಿಮ ಪರೀಕ್ಷೆಯ ಕುರಿತು ಮಂಗಳವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆ ಉದ್ಘಾಟಿಸಿ ಮಾತನಾಡಿದರು.

ಉತ್ತಮ ಫಲಿತಾಂಶಕ್ಕೆ ಯತ್ನ

ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಮಾತನಾಡಿ, ಶಿಕ್ಷಣ ಹಾಗೂ ಆರೋಗ್ಯಕ್ಕೆ ಶಾಸಕ ಯಶ್​ಪಾಲ್​ ಅವರು ವಿಶೇಷ ಆದ್ಯತೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಲಭಿಸುವಂತಾಗಲು ಸಹಕಾರ, ವ್ಯವಸ್ಥೆ ಕಲ್ಪಿಸುತ್ತಿದ್ದಾರೆ. ಪರೀಕ್ಷೆಯಲ್ಲಿ ಮಕ್ಕಳು ಉತ್ತಮ ಫಲಿತಾಂಶ ಗಳಿಸುವಂತಾಗಲು ಜಿಲ್ಲೆಯ ಶಿಕ್ಷಕರು ಕಾರ್ಯನಿರತರಾಗಿದ್ದಾರೆ. ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳೂ ಇದಕ್ಕೆ ಕೈಜೋಡಿಸಲಿದ್ದಾರೆ ಎಂದರು.

ಸಭೆಯಲ್ಲಿ ಉಡುಪಿ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಗದೀಶ್​, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಶಬಾನಾ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಇಂದಿರಾ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯೆ ನವ್ಯಾ ನಾಯಕ್​, ನಿವೃತ್ತ ಪ್ರಾಂಶುಪಾಲೆ ತಾರಾದೇವಿ ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕ ಗಂಗಾಧರ್​ ವಿ.ಎ. ಕಾರ್ಯಕ್ರಮ ನಿರ್ವಹಿಸಿದರು.

ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳ ಜೀವನ ರೂಪಿಸುವ ಮಹತ್ವದ ಹೊಣೆ ಶಿಕ್ಷಕರದ್ದಾಗಿದೆ. ಕರಾವಳಿ ಜಿಲ್ಲೆಯ ಶಿಕ್ಷಕರ ಬದ್ಧತೆ, ಪ್ರಾಮಾಣಿಕ ಸೇವೆಯಿಂದ ಜಿಲ್ಲೆಯ ಶೈಕ್ಷಣಿಕ ಸಾಧನೆ ಇತರರಿಗೂ ಮಾದರಿಯಾಗಿದೆ. | ಸುಕನ್ಯಾ ಮೇರಿ. ಪ್ರಾಂಶುಪಾಲೆ, ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net