ಎಸ್ಸೆಸ್ಸೆಲ್ಸಿ ಪರೀಕ್ಷೆ -3 ಆ.2ರಿಂದ

Published on

ಕೊಪ್ಪಳ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-3 ಆ.2ರಿಂದ 9ವರೆಗೆ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಯಲಿವೆ. ಸುಗಮ ಪರೀಕ್ಷೆ ನಡೆಸುವ ಉದ್ದೇಶದಿಂದ ಪರೀಕ್ಷೆ ಕೇಂದ್ರ ಸುತ್ತ 200 ಮೀಟರ್​ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ನಲಿನ್​ ಅತುಲ್​ ಆದೇಶಿಸಿದ್ದಾರೆ.

ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ತಾಲೂಕಿನ 13 ಪರೀಾ ಕೇಂದ್ರಗಳಲ್ಲಿ ಪರೀೆ ನಡೆಯಲಿವೆ. ಕೊಪ್ಪಳದ ಬಾಲಕರ ಸರ್ಕಾರಿ ಪಿಯು ಕಾಲೇಜು, ಗವಿಸಿದ್ದೇಶ್ವರ ಪ್ರೌಢಶಾಲೆ ಹಾಗೂ ಬಾಲಕಿಯರ ಸರ್ಕಾರಿ ಕಾಲೇಜು, ಗಂಗಾವತಿ ಸರ್ಕಾರಿ ಬಾಲಕಿಯರ ಪಿಯು ಕಾಲೇಜು, ಬೆಥಲ್​ ಆಂಗ್ಲ ಪ್ರೌಢ ಶಾಲೆ, ಲಯನ್ಸ್​ ಮಾದರಿಯ ಪ್ರೌಢ ಶಾಲೆ ಹಾಗೂ ಎಚ್​.ಆರ್​ ಸರೋಜಮ್ಮ ಸಂಯುಕ್ತ ಪದವಿ ಪೂರ್ವ ಕಾಲೇಜು,

ಕುಷ್ಟಗಿ ತಾಲೂಕಿನ ಹನುಮಸಾಗರದ ಕರ್ನಾಟಕ ಪಬ್ಲಿಕ್​ ಶಾಲೆ, ತಾವರಗೇರಾದ ಕರ್ನಾಟಕ ಪಬ್ಲಿಕ್​ ಶಾಲೆ ಹಾಗೂ ಕುಷ್ಟಗಿ ಪಟ್ಟಣದ ಸರ್ಕಾರಿ ಬಾಲಕಿಯರ ಪಿಯು ಕಾಲೇಜು, ಯಲಬುರ್ಗಾದ ಸರ್ಕಾರಿ ಪಿಯು ಕಾಲೇಜು, ಮಂಜುನಾಥ ಪ್ರೌಢ ಶಾಲೆ ಮತ್ತು ಕುಕನೂರಿನ ವಿದ್ಯಾನಂದ ಗುರುಕುಲ ಪಿಯು ಕಾಲೇಜಿನಲ್ಲಿ ಪರೀೆ ಜರುಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net