

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ರಾಜ್ಯಾದ್ಯಂತ 772 ಕೇಂದ್ರಗಳಲ್ಲಿ ಅಯೋಜಿಸಿದ್ದ 2020ರ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜೂನ್/ಜುಲೈನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಅನಾರೋಗ್ಯದಿಂದ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.
ಇಂದು ಗಣಿತ ಪರೀಕ್ಷೆ ನಡೆಯಿತು. ಎಲ್ಲಿಯೂ ನಕಲು ಮಾಡಿ ಸಿಕ್ಕಿ ಬಿದ್ದ ಪ್ರಕರಣಗಳು ವರದಿಯಾಗಲಿಲ್ಲ.
ಮುಖ್ಯ ಪರೀಕ್ಷೆಯಲ್ಲಿ ಕರೊನಾ ಸೇರಿದಂತೆ ಇನ್ನಿತರ ಅನಾರೋಗ್ಯ ಕಾರಣಗಳಿಂದ ಪರೀಕ್ಷೆಗೆ ಗೈರು ಹಾಜರಾಗಿದ್ದ 15,075 ವಿದ್ಯಾರ್ಥಿಗಳಿಗೆ ‘ಪ್ರಥಮ ಅವಕಾಶ’ವೆಂದು ಪರಿಗಣಿಸಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು.
ಅನಾರೋಗ್ಯದಿಂದ ಬಳಲುತ್ತಿರುವ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಸೆ.29ರಂದು ಪರೀಕ್ಷೆ ಕೊನೆಗೊಳ್ಳಲಿದೆ.