ಎಲ್ಲ ಪರೀಕ್ಷಾ ಕೊಠಡಿಗಳಿಗೆ ಸಿಸಿ ಟಿವಿ ಅಳವಡಿಕೆ

Dbp03
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ, ತಾಲೂಕು ಆಡಳಿತದ ಮಾರ್ಗದರ್ಶನದಲ್ಲಿ ಪಾರದರ್ಶಕತೆಯಿಂದ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದಾ ಅನೀಸ್ ತಿಳಿಸಿದ್ದಾರೆ.
ತಾಲೂಕಿನಲ್ಲಿ 17 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 30 ಅನುದಾನ ರಹಿತ ಪ್ರೌಢಶಾಲೆಗಳನ್ನು ಒಳಗೊಂಡಂತೆ ಒಟ್ಟು 63 ಪ್ರೌಢಶಾಲೆಗಳಿದೆ. ಈ ಪ್ರೌಢಶಾಲೆಗಳಿಂದ 1,986 ಬಾಲಕರು ಮತ್ತು 1,977 ಬಾಲಕಿಯರು ಸೇರಿ ಒಟ್ಟು 3,963 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಪ್ರತಿ ಕೇಂದ್ರಕ್ಕೂ ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೊಠಡಿಗಳಿಗೆ ಸಿಸಿ ಟಿವಿಗಳನ್ನು ಅಳವಡಿಸಲಾಗಿದ್ದು, ವೆಬ್ ಕ್ಯಾಸ್ಟಿಂಗ್ ಮಾಡುತ್ತಿರುವುದು ಈ ಬಾರಿಯ ವಿಶೇಷ. ಪರೀಕ್ಷಾ ಕೇಂದ್ರಗಳಲ್ಲಿನ ಚಟುವಟಿಕೆಗಳನ್ನು ವೀಕ್ಷಣೆ ಮಾಡಲು ಜಿಲ್ಲಾ ವೀಕ್ಷಣಾ ಕೊಠಡಿ ಸ್ಥಾಪಿಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ 100 ಮೀ ಅಂತರದಲ್ಲಿ ನಿಷೇದಾಜ್ಞೆ ಜಾರಿ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗುತ್ತದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ತಂಡದಿಂದ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಲಾಗುವುದು. ಪ್ರತಿ ಕೇಂದ್ರಕ್ಕೂ ವೈದ್ಯಕೀಯ ಸಿಬ್ಬಂದಿ ನೇಮಕ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಶ್ಯವಿರುವ ಎಲ್ಲ ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net