ಎಸ್.ಎಸ್.ಎಲ್.ಸಿ ಪರೀಕ್ಷೆ : ಶುಲ್ಕ ಪಾವತಿಯಿಂದ ವಿನಾಯಿತಿ

IMG-20250207-WA0064
Published on
ಗದಗ : 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು  ಮೇ 26 ರಿಂದ ಜೂನ್ 02 ರವರೆಗೆ ನಡೆಸಲಾಗುತ್ತದೆ. ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೊಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ 10 ಕೊನೆಯ ದಿನವಾಗಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಗದಗ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷೆ-2 ಬರೆಯುವಂತೆ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net