

ಬಳ್ಳಾರಿ: ರಾಜ್ಯಾದ್ಯಂತ ಮಾ.28 ರಿಂದ ಏ.11ರವೆರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಡಳಿತ ಕೋವಿಡ್ ಮಾರ್ಗಸೂಚಿ ಅನುಸಾರ ಸಕಲ ಸಿದ್ಧತೆಗಳನ್ನು ಕೈಗೊಂಡಿವೆ.
2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಅವಳಿ ಜಿಲ್ಲೆಯ 626 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 46,474 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ತಲಾ 139 ಮುಖ್ಯ ಅಧೀಕ್ಷಕರು, 139 ಸ್ಥಾನಿಕ ಜಾಗೃತಿದಳದ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಬಳ್ಳಾರಿ ಮತ್ತು ವಿಜಯನಗರದ 626 ಕೇಂದ್ರಗಳಲ್ಲಿ ನಕಲು ಮಾಡಬಾರದು ಎಂಬ ಉದ್ದೇಶದಿಂದ ಸಿಸಿ ಕ್ಯಾಮರಾ ಆಳವಡಿಕೆ ಮಾಡಲಾಗುತ್ತಿದೆ. ಈಗಾಗಲೇ ಎಲ್ಲಾ ಶಾಲೆಗಳ ಬಿಇಒ ಜತೆ ಚರ್ಚಿಸಿ ಕ್ರಮಕೊಳ್ಳಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತ 200ಮೀಟರ್ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದು, ಜೆರಾಕ್ಸ್ ಸೆಂಟರ್ ಮತ್ತು ಕಂಪ್ಯೂಟರ್, ಸೈಬರ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲಾಗಿದೆ. ಈ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಅವಳಿ ಜಿಲ್ಲೆಯಲ್ಲಿ 626 ಪರೀಕ್ಷಾ ಕೇಂದ್ರಳಲ್ಲಿ ಪರೀಕ್ಷೆ ನಡೆಯಲಿವೆ. ಎಲ್ಲ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಸಿಂಪಡನೆ ವ್ಯವಸ್ಥೆ ಮಾಡಿಸಲಾಗಿದೆ. ಬಸ್‌ಗಳಿಲ್ಲದ ಸ್ಥಳದಲ್ಲಿ ಬಸ್ ವ್ಯವಸ್ಥೆ ಮಾಡಿಸಲಾಗಿದೆ. ಯಾವ ವಿದ್ಯಾರ್ಥಿಗಳು ಹೆದರಿಕೊಳ್ಳಬಾರದು. ಧೈರ್ಯದಿಂದ ಪರೀಕ್ಷೆ ಎದುರಿಸಬೇಕು.| ಸಿ.ರಾಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ, ಬಳ್ಳಾರಿ.