ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯ

ವಿದ್ಯಾರ್ಥಿಗಳ ಸಂಭ್ರಮದಲ್ಲಿ ಭಾಗವಹಿಸಿದ ಡಿಸಿ ಮತ್ತು ಪರೀಕ್ಷಾ ಕೇಂದ್ರಕ್ಕೆ ಡಿಸಿ ಭೇಟಿ (9)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ- 1 ಶುಕ್ರವಾರ ಮುಕ್ತಾಯಗೊಂಡವು. ಕೊನೆಯ ದಿನ ಜರುಗಿದ ತೃತೀಯ ಭಾಷಾ ವಿಷಯಕ್ಕೆ 28,504 ವಿದ್ಯಾರ್ಥಿಗಳು ನೋಂದಾಯಿಸಿಕೊAಡಿದ್ದರು. ಈ ಪೈಕಿ 28,010 ಜನ ಹಾಜರಾಗಿ 494 ಜನ ಗೈರಾಗಿದ್ದರು. ಒಟ್ಟಾರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ವಿವಿಧ ಕಾರಣಗಳಿಂದ 2,806 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ತಿಳಿಸಿದ್ದಾರೆ.

ಕೊನೆಯ ಪರೀಕ್ಷೆಯಂದು ಜಿಲ್ಲಾಽಕಾರಿ ದಿವ್ಯ ಪ್ರಭು ಜಿಲ್ಲೆಯ ವಿವಿಧ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳ ಸಂಭ್ರಮದಲ್ಲಿ ಪಾಲ್ಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net