ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್: ಕೊರಗಿ ಕೊರಗಿ ಆತ್ಮಹತ್ಯೆಗೆ ಶರಣಾದ ಹುಡುಗ..!

SSLC Exam
Published on

ಭಟ್ಕಳ: ಪರೀಕ್ಷೆಯಲ್ಲಿ ಫೇಲ್ ಆಗಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.

ಮೃತ ಯುವಕ ಹರ್ಷಿತ ನಾಗರಾಜ ನಾಯ್ಕ(17) ಎಂದು ತಿಳಿದು ಬಂದಿದೆ. ಈತ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಅಲ್ಲಿಂದ ಇಲ್ಲಿಯವರೆಗೆ ಮನಸ್ಸಿಗೆ ಹಚ್ಚಿಕೊಂಡು ತನ್ನ ಕುತ್ತಿಗೆಗೆ ಸೀರೆಯಿಂದ ಬಿಗಿದುಕೊಂಡು ಅದನ್ನು ಮನೆಯ ಫ್ಯಾನಿಗೆ ಕಟ್ಟಿ ಉರುಳು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಯುವಕನ ಸಂಬಂದಿಯೋರ್ವರು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net