ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ

Exam
Published on

ಮೈಸೂರು: ಜಿಲ್ಲೆಯಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಡೆದು, ಜಿಲ್ಲೆಯ ಫಲಿತಾಂಶವನ್ನು ಮೇಲು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ರಮ ಕೈಗೊಂಡಿದೆ ಎಂದು ಉಪ ನಿರ್ದೇಶಕ ಎಚ್.ಕೆ. ಪಾಂಡು ತಿಳಿಸಿದರು.

ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಇಲಾಖೆ ಎಲ್ಲ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳನ್ನು ಸುಲಭವಾಗಿ ಗುರುತಿಸಲು ಎಲ್ಲರೂ ಶಾಲಾ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಲಾಗಿದೆ. ಮೊಬೈಲ್, ಸ್ಮಾರ್ಟ್‌ವಾಚ್ ಮೊದಲಾದವನ್ನು ನಿರ್ಬಂಧಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರದಲ್ಲಿ 35, ಗ್ರಾಮೀಣ ಪ್ರದೇಶದಲ್ಲಿ 97 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 132 ಪರೀಕ್ಷಾ ಕೇಂದ್ರಗಳಿದ್ದು, 40,333 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾ. 25 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪ್ರಥಮ ಭಾಷೆ, 27 ರಂದು ಸಮಾಜ ವಿಜ್ಞಾನ, 30 ರಂದು ವಿಜ್ಞಾನ, ಏಪ್ರಿಲ್ 2 ರಂದು ಗಣಿತ, ಏ.3 ರಂದು ಪರ್ಯಾಯ ವಿಷಯಗಳು, ಏ. 4ರಂದು ತೃತೀಯ ಭಾಷೆ, ಏ.6 ರಂದು ದ್ವಿತೀಯ ಭಾಷೆ ಪರೀಕ್ಷೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net