ಎಸ್​ಎಸ್​ ಎಲ್​ ಸಿ ಪರೀಕ್ಷೆಗೆ 14153 ವಿದ್ಯಾರ್ಥಿಗಳ ನೋಂದಣಿ

IMG-20250319-WA0010
Published on

ಉಡುಪಿ: ಜಿಲ್ಲೆಯಲ್ಲಿ ಮಾ.21ರಿಂದ ಏ.4ರವರೆಗೆ ಬೆಳಗ್ಗೆ 10 ರಿಂದ 1ಗಂಟೆವರೆಗೆ ಎಸ್​ ಎಸ್​ ಎಲ್​ ಸಿ ಪರೀೆ ನಡೆಯಲಿದ್ದು, 272 ಪ್ರೌಢಶಾಲೆಗಳಿಂದ ಒಟ್ಟು 7411 -ಹುಡುಗರು, 6742- ಹುಡುಗಿಯರು ಸೇರಿ ಒಟ್ಟು 14,153 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. 51 ವಿವಿಧ ಪರೀಾ ಕೇಂದ್ರಗಳಲ್ಲಿ ಓ.ಆರ್​.ಎಸ್​.. ಶುದ್ಧ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಸೌಲಭ್ಯ ಸಹಿತ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಶ್ನೆ ಪತ್ರಿಕೆಗಳನ್ನು ಸಂರಕ್ಷಿಸಿಡಲು ಜಿಲ್ಲಾ ಖಜಾನೆ ಉಡುಪಿ ಹಾಗೂ 2 ತಾಲೂಕು ಖಜಾನೆಗಳಲ್ಲಿ ಪೋಲೀಸ್​ ಪಹರೆಯೊಂದಿಗೆ ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಮತ್ತು ಉತ್ತರ ಪತ್ರಿಕೆಗಳನ್ನು ಪಡೆಯಲು ಜಿಲ್ಲೆಯಲ್ಲಿ ಒಟ್ಟು 22 ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1013 ಪರೀಕ್ಷಾ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

590 ಕೊಠಡಿಗಳಲ್ಲಿ ವೆಬ್​ ಕಾಸ್ಟಿಂಗ

ಪರೀಕ್ಷಾ ಅವ್ಯವಹಾರವನ್ನು ತಡೆಗಟ್ಟಲು 51 ಪರೀಕ್ಷಾ ಕೇಂದ್ರಗಳ 590 ಕೊಠಡಿಗಳಲ್ಲಿ ಸಿಸಿಟಿವಿ ವೀಕ್ಷಣೆಗಾಗಿ ವೆಬ್​ ಕಾಸ್ಟಿಂಗ್​ ನಡೆಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ 12 ಅಧಿಕಾರಿ ಮತ್ತು ಸಿಬ್ಬಂದಿಯ ತಂಡವನ್ನು ರಚಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅವರ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಎಲೆಕ್ಟ್ರಾನಿಕ್ಸ್​ ಸಾಮಗ್ರಿ ನಿಷೇಧ

ಪರೀಕ್ಷಾ ಕೇಂದ್ರದಲ್ಲಿ ಸ್ಮಾರ್ಟ್​ ವಾಚ್​, ಮೊಬೈಲ್​ ಪೋನ್​, ಬ್ಲೂಟೂತ್​ ಮುಂತಾದ ಎಲೆಕ್ಟ್ರಾನಿಕ್​ ಸಾಮಗ್ರಿಗಳನ್ನು ನಿಷೇಧಿಸಲಾಗಿದೆ. ಎಲ್ಲಾ ಪರೀಕ್ಷಾ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭದ ಒಂದು ಗಂಟೆ ಮುಂಚಿತವಾಗಿ ತೆರಳಿ, ನೋಂದಣಿ ಸಂಖ್ಯೆ ಮತ್ತು ಕೊಠಡಿ ಸಂಖ್ಯೆಯನ್ನು ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್​ ಪೋನ್​ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ, ಜಿಪಂ ಯೋಜನಾಧಿಕಾರಿ ಶ್ರೀನಿವಾಸ ರಾವ್​, ಡಿಡಿಪಿಐ ಗಣಪತಿ ಕೆ. ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net