

ಬಳ್ಳಾರಿ: ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿವೆ.
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಇಂದು ನಡೆಯಬೇಕಿತ್ತು. ಆದರೆ ಪರೀಕ್ಷೆಗೂ ಮೊದಲೇ ಸಿರಗುಪ್ಪದಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ವಾಟ್ಸ್ಆ್ಯಪ್ನಲ್ಲಿ ಹರಿದಾಡುತ್ತಿದೆ.
ಪ್ರಶ್ನೆ ಪತ್ರಿಕೆ ಬಹಿರಂಗವಾಗಲು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗುತ್ತಿದೆ. ಈ ಬಗ್ಗೆ ಬಳ್ಳಾರಿ ಡಿಡಿಪಿಐ ಸಿ. ರಾಮಪ್ಪ ಹೇಳಿಕೆ ನೀಡಿದ್ದು, ನಾವು ಈಗಾಗಲೇ ಎಸ್ಎಸ್ಎಲ್ಸಿ ಬೋರ್ಡ್ಗೆ ದೂರು ನೀಡಿದ್ದೇವೆ.
ಅದು ನಿಜವಾದ ಪ್ರಶ್ನೆ ಪತ್ರಿಕೆಯೋ, ಕಿಡಿಗೇಡಿಗಳು ಹರಿಬಿಟ್ಟಿರುವ ನಕಲಿ ಪ್ರಶ್ನೆ ಪತ್ರಿಕೆಯೋ ಗೊತ್ತಿಲ್ಲ. ಪೊಲೀಸ್ ತನಿಖೆಯಿಂದ ಗೊತ್ತಾಗಲಿದೆ ಎಂದಿದ್ದಾರೆ.